Breaking News

ಮತ್ತೆ ಮಹಾಮಾರಿ ಕೊರೊನಾ ಆತಂಕ ; ಹೊಸಪೇಟೆ ರೈಲ್ವೆ ಜಂಕ್ಷನ್ ನ 18 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್

Spread the love

ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ರೈಲ್ವೆ ಜಂಕ್ಷನ್‌ನ 18 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಎಲ್ಲ 18 ಕೊರೊನಾ ಸೋಂಕಿತರು ಒಂದೇ ಕಟ್ಟಡದಲ್ಲಿ ವಾಸವಾಗಿದ್ದಾರೆ. ಈ ಕಟ್ಟಡವನ್ನು 14 ದಿನಗಳ ಕಾಲ ಕಂಟೈನ್ಮೆಂಟ್ ವಲಯವನ್ನಾಗಿ ಒಳಪಡಿಸಲಾಗಿದೆ.

ಈ ಹಿನ್ನೆಲೆ ರೈಲ್ವೆ ಮೂಲಕ ಬರುವ ಪ್ರಯಾಣಿಕರ ಸುರಕ್ಷತೆಗೂ ಕ್ರಮಕೈಗೊಳ್ಳಲು ಆಡಳಿತ ತೀರ್ಮಾನಿಸಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ಕೋವಿಡ್ ರೂಲ್ಸ್ ಫಾಲೋ ಮಾಡಬೇಕು ಎಂದು ಉಪ ವಿಭಾಗಾಧಿಕಾರಿ ಸಿದ್ಧರಾಮೇಶ್ವರ ಹೇಳಿದ್ದಾರೆ.


Spread the love

About Laxminews 24x7

Check Also

40 ವರ್ಷಗಳ ದಾಸ್ಯಾಳ ಗ್ರಾಮದ ಕನಸು ನನಸು; ಸಚಿವ ಎಂ.ಬಿ. ಪಾಟೀಲ್ ಪ್ರಯತ್ನದಿಂದ ಬಸ್ ಸಂಚಾರ ಆರಂಭ

Spread the love 40 ವರ್ಷಗಳ ದಾಸ್ಯಾಳ ಗ್ರಾಮದ ಕನಸು ನನಸು; ಸಚಿವ ಎಂ.ಬಿ. ಪಾಟೀಲ್ ಪ್ರಯತ್ನದಿಂದ ಬಸ್ ಸಂಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ