Breaking News

2020ರಲ್ಲಿ ದೇಶದ 10 ಸಾವಿರ ಕಂಪನಿಗಳು ಬಂದ್! ಕರ್ನಾಟಕದಲ್ಲಿ ಎಷ್ಟು ಗೊತ್ತಾ?

Spread the love

ನವದೆಹಲಿ : 2020ರ ಏಪ್ರಿಲ್ ನಿಂದ ಈ ವರ್ಷದ ಫೆಬ್ರವರಿವರೆಗೆ ದೇಶದಲ್ಲಿ 10,000 ಕ್ಕೂ ಹೆಚ್ಚು ಕಂಪನಿಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ (ಎಂಸಿಎ) ಲಭ್ಯವಿರುವ ಇತ್ತೀಚಿನ ದತ್ತಾಂಶದ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಫೆಬ್ರವರಿವರೆಗೆ ಒಟ್ಟು 10,113 ಕಂಪನಿಗಳು ಕಂಪನಿಗಳ ಕಾಯ್ದೆ 2013ರ ಸೆಕ್ಷನ್ 248(2) ರ ಅಡಿಯಲ್ಲಿ ಸ್ಥಗಿತವಾಗಿವೆ.ಸೆಕ್ಷನ್ 248(2) ಪ್ರಕಾರ ಕಂಪನಿಗಳು ಸ್ವಯಂ ಪ್ರೇರಿತವಾಗಿ ತಮ್ಮ ವ್ಯಾಪಾರಗಳನ್ನು ಮುಚ್ಚಿದ್ದವು ಮತ್ತು ಯಾವುದೇ ದಂಡದ ಕ್ರಮದಿಂದಲ್ಲ ಎಂದು ತಿಳಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿ ಹೆಚ್ಚು 2,394 ಕಂಪನಿಗಳು ಮುಚ್ಚಲ್ಪಟ್ಟಿವೆ. ಉತ್ತರ ಪ್ರದೇಶದಲ್ಲಿ 1,936 ಕಂಪನಿಗಳು ತಮಿಳುನಾಡಿನಲ್ಲಿ 1,322, ಮಹಾರಾಷ್ಟ್ರದಲ್ಲಿ 1,279, ಕರ್ನಾಟಕದಲ್ಲಿ 836, ಚಂಡೀಗಢದಲ್ಲಿ 501, ರಾಜಸ್ಥಾನದಲ್ಲಿ 479, ತೆಲಂಗಾಣದಲ್ಲಿ 404, ಕೇರಳದಲ್ಲಿ 307, ಜಾಖರ್ಂಡ್‍ನಲ್ಲಿ 137, ಮಧ್ಯಪ್ರದೇಶದಲ್ಲಿ 111 ಮತ್ತು ಬಿಹಾರದಲ್ಲಿ 104 ಸ್ವಯಂಪ್ರೇರಣೆಯಿಂದ ಮುಚ್ಚಿವೆ ಎಂದು ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ