Breaking News

ಸರ್ಕಾರದ ಮೇಲೆ ಅಶೋಕ್ ಪೂಜಾರಿ ಗಂಭೀರ್ ಆರೋಪ..

Spread the love

ಓರ್ವ ಜವಾಬ್ದಾರಿಯುತ ಹಿರಿಯ ಸಚಿವ ರಾಸಲೀಲೆ ಸಿಡಿ ಹಗರಣದಲ್ಲಿ ರಾಜೀನಾಮೆ ಕೊಟ್ಟಿದ್ದಾರೆ ಎಂದರೆ ಅದು ಸಣ್ಣ ವಿಷಯ ಅಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಆದರೆ ಸರ್ಕಾರ ಈವರೆಗೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಗಂಭೀರ ಆರೋಪ ಮಾಡಿದರು.

ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ ಪೂಜಾರಿ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಸಂಪೂರ್ಣವಾಗಿ ಇದು ಫೇಕ್ ವಿಡಿಯೋ ಇದೆ ಎಂದು ಹೇಳುತ್ತಿದ್ದಾರೆ. ಇದು ನಕಲಿ ವಿಡಿಯೋ ಆಗಿತ್ತು ಎಂದಾದ್ರೆ ಸಕಾರಣ ಇಲ್ಲದೇ ಓರ್ವ ಸಚಿವ ಬಲಿಪಶು ಆಗಬಾರದು. ಆದ್ದರಿಂದ ಈ ಎಲ್ಲಾ ಹೇಳಿಕೆಗಳಲ್ಲಿ ಗೊಂದಲವಿದೆ. ಸಿಡಿ ಫೇಕ್, ಹನಿಟ್ರ್ಯಾಪ್ ಎಂಬ ಆರೋಪವಿದೆ, ಅದೇ ರೀತಿ ಮಾಧ್ಯಮಗಳಲ್ಲಿ ಬೇರೆ ಬೇರೆ ರೀತಿ ಅಭಿಪ್ರಾಯಗಳು ಆಗುತ್ತಿವೆ. ಈ ಎಲ್ಲದಕ್ಕೂ ತೆರೆ ಎಳೆಯುವ ಕೆಲಸವನ್ನು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮಾಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ