ಬೆಂಗಳೂರು, ಮಾ.10- ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತಾಗಿ ಆಡಳಿತ ಪಕ್ಷದ ಸದಸ್ಯರ ನಡುವೆಯೇ ವಾಗ್ವಾದ ನಡೆಯಿತು. ಶಾಸಕ ಬಸವನಗೌಡ ಪಾಟೀಲ್ ವಿಷಯ ಪ್ರಸ್ತಾಪಿಸಿ ನಾವು ಅನೇಕ ದಿನಗಳಿಂದ ಮೀಸಲಾತಿ ಗಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರದಿಂದ ನಮಗೆ ಯಾವುದೇ ರೀತಿಯ ಸ್ಪಷ್ಟ ಭರವಸೆ ಸಿಗುತ್ತಿಲ್ಲ. ಮೀಸಲಾತಿ ಕೊಡುತ್ತೀರೋ, ಇಲ್ಲವೋ ಎಂಬುದನ್ನು ಸದನದಲ್ಲೇ ಸ್ಪಷ್ಟವಾಗಿ ತಿಳಿಸಿ ಎಂದು ಒತ್ತಾಯಿಸಿದರು.
ಸದನದಲ್ಲಿ ಇಂದು ಚರ್ಚೆಗೆ ಅವಕಾಶ ಕೊಡುತ್ತೇವೆ ಎಂದಿದ್ದೀರಿ.
ಮುಖ್ಯಮಂತ್ರಿಗಳು ನಾಪತ್ತೆಯಾಗಿದ್ದಾರೆ. ಇನ್ನೊಂದು ಕಡೆ ಸಚಿವರೂ ಇಲ್ಲ. ನಮ್ಮನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ಮಾಡುತ್ತಿದ್ದೀರಿ. ಕಳೆದ ಚುನಾವಣೆಯಲ್ಲಿ ನಮ್ಮ ಸಮುದಾಯ ನಿಮಗೆ ದೊಡ್ಡ ಕೊಡುಗೆಯನ್ನೇ ನೀಡಿದೆ. ಇಂದು ಮುಖ್ಯಮಂತ್ರಿ ಸ್ಥಾನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಕೂರುವುದಕ್ಕೆ ಪಂಚಮಸಾಲಿ ಸಮುದಾಯದ ಕೊಡುಗೆಯನ್ನು ಮರೆಯಬೇಡಿ ಎಂದರು.
Laxmi News 24×7