Breaking News

C.D. ಪ್ರಕರಣ – ಯುವತಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು!

Spread the love

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋದಲ್ಲಿದ್ದ ಯುವತಿ ಮಾ. 2ರಂದು ಮನೆಯಿಂದ ಹೊರಗೆ ಬಂದಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

ಅಂದು ರಾತ್ರಿ 9.30ಕ್ಕೆ ಯುವತಿ ಬ್ಯಾಗ್ ಹಿಡಿದು ಹೊರಗೆ ಬಂದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ರಾಸಲೀಲೆಯ ವಿಡಿಯೋ ಬಿಡುಗಡೆಗೊಂಡ ನಂತರ ನಾಲ್ಕೂವರೆ ಗಂಟೆ ಯುವತಿ ಫೋನ್ ಆನ್ ಆಗಿತ್ತು. ಆದರೆ, ಮನೆಯಿಂದ ಹೊರಗೆ ಹೋಗುವ ಮೊದಲು ಅದು ಸ್ವೀಚ್ ಆಫ್ ಆಗಿದೆ. ಆ ನಂತರ ಯುವತಿ ಯಾರಿಗೂ ಫೋನ್ ಮಾಡಿಲ್ಲ. ಹೊಸ ಸಿಮ್ ಕೂಡ ಬಳಕೆ ಮಾಡಿಲ್ಲ. ಹಳೆಯ ಸಿಮ್ ನ್ನು ಯುವತಿ ಡಿ ಆಕ್ಟಿವ್ ಮಾಡಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭಿಸಿದೆ.

ಮನೆಯಿಂದ ಹೊರಗೆ ಹೋಗುವ ಮುನ್ನ ಯುವತಿ ಹಲವರನ್ನು ಸಂಪರ್ಕಿಸಿದ್ದಾಳೆ. ಆದರೆ, ಈ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇಷ್ಟೆಲ್ಲ ಯುವತಿಯ ಗುರುತು ಹಾಗೂ ವಿಳಾಸ ಪತ್ತೆ ಮಾಡಿರುವ ಪೊಲೀಸರು ವಿಚಾರಣೆಗೆ ಹಿಂದೇಟು ಹಾಕುತ್ತಿರುವುದೇಕೆ? ಎಂಬ ಅನುಮಾನಗಳು ಸದ್ಯ ಎಲ್ಲರನ್ನೂ ಕಾಡುತ್ತಿವೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ