Breaking News

ಮಗಳ ಮೇಲೆ ಅತ್ಯಾಚಾರ! ದೂರು ಕೊಟ್ಟ ತಂದೆ ಅಪಘಾತದಲ್ಲಿ ಸಾವು!

Spread the love

ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರ ವಿರುದ್ಧ ದೂರು ನೀಡಿದ್ದ ವ್ಯಕ್ತಿ ಎರಡು ದಿನಗಳ ಬಳಿಕ ಅಪಘಾತದಲ್ಲಿ ಮೃತಪಟ್ಟಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅದು ಕೂಡ ತಮ್ಮ ಮಗಳ ವೈದ್ಯಕೀಯ ಪರೀಕ್ಷೆ ನಡೆಯುತ್ತಿದ್ದ ಆಸ್ಪತ್ರೆ ಎದುರಿಗೇ ಅಪಘಾತವಾಗಿ ಮೃತಪಟ್ಟಿದ್ದಾರೆ. ಈ ಘಟನೆ ಉತ್ತರಪ್ರದೇಶದ ಕಾನ್ಪುರ್​ನಲ್ಲಿ ನಡೆದಿದೆ. ಇವತ್ತು ಬೆಳಗ್ಗೆ ಟೀ ಕುಡಿಯೋಣ ಅಂತ ವ್ಯಕ್ತಿ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಈ ವೇಳೆ ಎರಗಿ ಬಂದ ಟ್ರಕ್ ಅವರ ಪ್ರಾಣವನ್ನೇ ತೆಗೆದುಬಿಟ್ಟಿದೆ. ಹೀಗಾಗಿ ಆರೋಪಿ ಕಡೆಯವರೇ ಅಪಘಾತ ಮಾಡಿಸಿ ಕೊಲೆ ಮಾಡಿದ್ದಾರಾ ಅನ್ನೋ ಅನುಮಾನ ಹುಟ್ಟಿದೆ. ಅತ್ಯಾಚಾರ ಆರೋಪಿಯ ತಂದೆ ಉತ್ತರಪ್ರದೇಶದ ಕನ್ನೌಜ್​ ಜಿಲ್ಲೆಯಲ್ಲಿ ಸಬ್ ಇನ್ಸ್​ಪೆಕ್ಟರ್ ಅಂತೆ. ಹೀಗಾಗಿ ದೂರು ಕೊಟ್ಟ ಬಳಿಕ ನಮಗೆ ಜೀವ ಬೆದರಿಕೆ ಹಾಕಲಾಗ್ತಿದೆ, ಪೊಲೀಸರು ಕೂಡ ಆರೋಪಿಗಳ ಜೊತೆ ಶಾಮೀಲಾಗಿದ್ದಾರೆ ಅಂತ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಹೆದರಿಸಿ ಬೆದರಿಸಿ ಕೇಸ್ ವಾಪಸ್ ಪಡೆಯಲು ಆರೋಪಿಗಳ ಕಡೆಯವರು ಈ ರೀತಿ ಮಾಡಿದ್ದಾರಾ ಅನ್ನೋ ಶಂಕೆ ವ್ಯಕ್ತವಾಗಿದೆ. ಅಂದ್ಹಾಗೆ ಕಾನ್ಪುರ್​ನಲ್ಲಿ ಎರಡು ದಿನಗಳ ಹಿಂದಷ್ಟೇ 13 ವರ್ಷದ ಬಾಲಕಿ ಮೇಲೆ ಮೂವರು ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ರು. ಇದೀಗ ಅವರೇ ಇಲ್ಲವಾಗಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ