Breaking News

ಕಮಲ -ಕೈ TWITTER ಫೈಟ್

Spread the love

ಬೆಂಗಳೂರು, – ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವಾಗ್ವಾದ ನಡೆದಿದೆ. ಬಿಜೆಪಿ ಒಡೆದ ಮನೆಯಲ್ಲ, ಛಿದ್ರಗೊಂಡು ಜೋಡಿಸಲಾಗದ ಮಡಕೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಶೋಕಾಸ್ ನೋಟಿಸ್ ಕಥೆ ಏನಾಯ್ತು ಎಂಬ ವರದಿಯನ್ನು ಲಗತ್ತಿಸಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದೆ.

ಬಿಜೆಪಿ ನಡೆಸುತ್ತಿರುವ ಯಡಿಯೂರಪ್ಪ ಮುಕ್ತ ಬಿಜೆಪಿ ಅಭಿಯಾನದ ಮುಖವಾಣಿಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಯಾವುದೇ ಕ್ರಮ ಕೈಗೊಳ್ಳದೆ ಮಜಾ ಅನುಭವಿಸುತ್ತಿದ್ದಾರೆ. ಕರ್ನಾಟಕ ಬಿಜೆಪಿ ಕೇವಲ ಒಡೆದ ಮನೆಯಲ್ಲ, ಛಿದ್ರಗೊಂಡು ಜೋಡಿಸಲಾಗದ ಮಡಕೆಯಾಗಿದೆ. `ಸಿಡಿ` ಸರ್ಕಾರದ ಕಿತ್ತಾಟದಲ್ಲಿ ರಾಜ್ಯ ಅನಾಥವಾಗಿದೆ ಎಂದು ಕುಟುಕಿದೆ.ಇದಕ್ಕೆ ತನ್ನ ಟ್ವಿಟರ್ ಖಾತೆಯಲ್ಲಿ ತೀಕ್ಷಣವಾಗಿ ತಿರುಗೇಟು ನೀಡಿರುವ ಬಿಜೆಪಿ, ಜೆಡಿಎಸ್ ಬಿತ್ತಿದ ಬೀಜ ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯುತ್ತಿದೆ. ಇದು ಬೆಳೆ ಅಲ್ಲ, ಕಳೆ ಎಂಬುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಈಗ ಅರಿವಾಗುತ್ತಿದೆ ಎಂದು ಲೇವಡಿ ಮಾಡಿದೆ. ಈ ಕಳೆ ಎಂಬ ಸಿದ್ದರಾಮಯ್ಯ ಅವರನ್ನು ಬೇರು ಸಮೇತ ಕಿತ್ತು ಹಾಕಲು ಮೂಲ ಕಾಂಗ್ರೆಸ್ಸಿಗರು ಪಣ ತೊಟ್ಟಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದ್ದು, ಕಾಂಗ್ರೆಸ್‍ನಲ್ಲಿ ಮೂಲ ವಲಸಿಗರ ನಡುವಿನ ಕಿತ್ತಾಟದ ಸುದ್ದಿಯನ್ನು ಲಗತ್ತಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ