Breaking News

ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಕೊಡಬೇಕು: ಶ್ರೀಮಂತ ಪಾಟೀಲ

Spread the love

ಬೆಳಗಾವಿ: ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಕೊಡಬೇಕು. ಈ ಬಗ್ಗೆ ನಾನು ಸಹ ಸಿಎಂಗೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಶ್ರೀಮಂತ್ ಪಾಟೀಲ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ರಮೇಶ್ ಜಾರಕಿಹೊಳಿ‌ ಹೇಳಿದಂತೆ ಸಿಡಿ ಪ್ರಕರಣದ ಬಗ್ಗೆ ಆದಷ್ಟು ಬೇಗ ಉನ್ನತ ಮಟ್ಟದ ತನಿಖೆಯಾಗಬೇಕು. ರಮೇಶ್​ ಒಳ್ಳೆಯ ಮನುಷ್ಯ. ನನ್ನ ಅಭಿಪ್ರಾಯದಂತೆ ಅವರಿಗೆ ಕ್ಲೀನ್ ಚಿಟ್​ ಸಿಗಬಹುದು. ಹೀಗಾಗಿ, ಸಮಗ್ರ ತನಿಖೆ ಆಗಬೇಕು. ಪ್ರಕರಣದಲ್ಲಿ ಯಾರಿದ್ದಾರೋ ಅವರಿಗೆ ಶಿಕ್ಷೆಯಾಗಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ ಎಂದರು.

ಕಳೆದ ಹಲವು ವರ್ಷಗಳಿಂದ ಉತ್ತರ ಭಾಗದ ನೀರಾವರಿ ಯೋಜನೆಗಳು ಸಾಕಷ್ಟು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಹೀಗಾಗಿ, ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಅವರಿಗೆ ಕೊಡಬೇಕು. ಇದರಿಂದ ಈ ಭಾಗದ ಸಾಕಷ್ಟು ಯೋಜನೆಗಳನ್ನು ಪೂರ್ಣಗೊಳಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಸುವರ್ಣಸೌಧದ ಮುಂದೆ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರಧ್ವಜ ಅನಾವರಣ

Spread the loveಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ