Breaking News

ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ: ಎಚ್ ಡಿ ರೇವಣ್ಣ

Spread the love

ಹಾಸನ, ಮಾರ್ಚ್.12: ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ ಕಣ್ರಿ.. ರಾಜಕಾರಣಿಗಳಿಗೆ ಮನುಷ್ಯತ್ವ ಇರಬೇಕು” ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಎಚ್ ಡಿ ರೇವಣ್ಣ, ನಾವು ಮೊದಲು ಮನುಷ್ಯತ್ವನ್ನು ಹೊಂದಿರಬೇಕು ಎಂದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಹಳ ಕಷ್ಟಪಟ್ಟು ಮೇಲೆ ಬಂದವರು. ಒಳ್ಳೆಯದ್ದು ಮತ್ತು ಕೆಟ್ಟದ್ದನ್ನು ದೇವರಿಗೆ ಬಿಡೋಣ. ನಾನು ಅವರಿಗೆ ಧೈರ್ಯ ಹೇಳಿರುವುದಂತೂ ನಿಜ ಎಂದು ರೇವಣ್ಣ ಸ್ಪಷ್ಟಪಡಿಸಿದ್ದಾರೆ.

 

ರಾಜಕೀಯ ಪಕ್ಷ ಯಾವುದೇ ಆಗಿರಬಹುದು. ಇಲ್ಲಿ ರಾಜಕೀಯ ಪಕ್ಷ ಮುಖ್ಯ ಆಗಿರುವುದಿಲ್ಲ. ಇಲ್ಲಿ ವ್ಯಕ್ತಿ ಮುಖ್ಯವಾಗುತ್ತಾರೆ. ಇಂಥ ವಿಚಾರದಲ್ಲಿ ರಾಜಕೀಯ ಮಾಡಬಾರದು. ಅದಕ್ಕಾಗಿಯೇ ನೀವು ಭಯ ಪಡುವ ಅಗತ್ಯವಿಲ್ಲ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಧೈರ್ಯ ಹೇಳಿದ್ದೇನೆ ಅಂತಾ ಮಾಜಿ ಸಚಿವ ಎಚ್ ಡಿ ರೇವಣ್ಣ ತಿಳಿಸಿದ್ದಾರೆ.

ಸಿಡಿ ಪ್ರಕರಣದ ತನಿಖೆಗೆ ಎಸ್‌ಐಟಿ:

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ಖಡಕ್ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಸಿಡಿ ಪ್ರಕರಣದ ತನಿಖೆ ನಡೆಸಲಿದೆ. ಐಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸಿಸಿಬಿ ಡಿಸಿಪಿ ಕೆ.ಪಿ. ರವಿಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಸಿಸಿಬಿ ಎಸಿಬಿ ಧರ್ಮೇಂದ್ರ, ಸಿಸಿಬಿ ಇನ್‌ಸ್ಪೆಕ್ಟರ್ ಪ್ರಶಾಂತ್ ಬಾಬು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಾರುತಿ ಈ ಎಸ್‌ಐಟಿ ತಂಡದಲ್ಲಿದ್ದಾರೆ.


Spread the love

About Laxminews 24x7

Check Also

“ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಡಿ ಕೆ ಶಿವಕುಮಾರ್

Spread the loveಬೆಂಗಳೂರು: ಸುಗಮ ಮತ್ತು ಸುರಕ್ಷಿತ ರಸ್ತೆ ಖಾತರಿ ನಿಟ್ಟಿನಲ್ಲಿ ಬಿಬಿಎಂಪಿಯು ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ