Breaking News
Home / Uncategorized / ಪುಣೆಯಲ್ಲಿ ಮಾರ್ಚ್ 21 ರವರೆಗೆ ಶಾಲೆ ಬಂದ್ : ಮಹಾರಾಷ್ಟ್ರ ಸರ್ಕಾರ

ಪುಣೆಯಲ್ಲಿ ಮಾರ್ಚ್ 21 ರವರೆಗೆ ಶಾಲೆ ಬಂದ್ : ಮಹಾರಾಷ್ಟ್ರ ಸರ್ಕಾರ

Spread the love

ಪುಣೆ : ಕೊರೋನಾ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಪುಣೆಯಲ್ಲಿ ಮಾರ್ಚ್ 21 ರವರೆಗೆ ಶಾಲೆ ಬಂದ್ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿದೆ .

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೊರೋನಾ ಅಬ್ಬರ ತಡೆಯುವ ನಿಟ್ಟಿನಲ್ಲಿ ಶಾಲೆ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ . ಮುಂದಿನ ಪರಿಸ್ಥಿತಿಯನ್ನ ಅವಲೋಕಿಸಿ ಶಾಲೆಗಳನ್ನ ಪುನರಾಂಭಿಸಬೇಕೆ ಅಥವಾ ಬಂದ್ ಮಾಡಬೇಕೆ ಅನ್ನೋದನ್ನ ನಿರ್ಧರಿಸಲಾಗುತ್ತದೆ ಎಂದು ಅಜಿತ್ ಪವಾರ್ ತಿಳಿಸಿದ್ದಾರೆ.

ಪುಣೆಯಲ್ಲಿ ಈಗಾಗಲೇ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿದ್ದು, ಪುಣೆಯಲ್ಲಿ ಗುರುವಾರ 2840 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ.


Spread the love

About Laxminews 24x7

Check Also

ದುಬೈನ ಅಪಾರ್ಟ್ ಮೆಂಟ್ ನಲ್ಲಿ ‘ಪ್ರಜ್ವಲ್ ರೇವಣ್ಣ’ ವಾಸ್ತವ್ಯ!

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ ದುಬೈನ ಅಪಾರ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ