Breaking News

ನಾಳೆ ಬಿ.ವೈ. ವಿಜಯೇಂದ್ರ ಅವರಿಂದ ಶರಣ ಸೇನೆ ಉದ್ಘಾಟನೆ

Spread the love

ಚಿತ್ರದುರ್ಗ, : ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಮಾ.14 ರ ಬೆಳಗ್ಗೆ 11ಕ್ಕೆ ಶರಣ ಸೇನೆ ಉದ್ಘಾಟನೆ ಹಾಗೂ ಯುವಶಕ್ತಿಯ ಅನಾವರಣ ಸಮಾರಂಭ ಆಯೋಜಿಸಲಾಗಿದೆ.

ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆವಹಿಸಲಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇನೆ ಉದ್ಘಾಟಿಸಲಿದ್ದಾರೆ. ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ ಶರಣ ಸೇನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಮಧ್ಯಾಹ್ನ 3 ಕ್ಕೆ ಡಾ.ಶಿವಮೂರ್ತಿ ಮುರುಘಾ ಶರಣರು ತ್ರಿವಿಧ ದಾಸೋಹಿಗಳು ಶ್ರೀ ಮುರುಘಾರಾಜೇಂದ್ರ ಬೃಹನ್ಮಠ ಇವರಿಂದ ಸಮಕಾಲೀನ ಚಿಂತನೆ ಕುರಿತು ಎರಡನೇ ಅಧಿವೇಶನ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಎಸ್ ಜೆ ಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಹನುಮಲಿ ಷಣ್ಮುಖಪ್ಪ, ಪಟೇಲ್ ಶಿವಕುಮಾರ್ ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ