Breaking News

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒಲವು ತಮ್ಮದಾಗಿದೆ : ಬಸವರಾಜ ಹೊರಟ್ಟಿ

Spread the love

ಹುಬ್ಬಳ್ಳಿ : ಎರಡು ಕಡೆ ವಿಧಾನಮಂಡಲ ಅಧಿವೇಶನ ನಡೆಸುತ್ತಿರುವ ನಿಟ್ಟಿನಲ್ಲಿ ಈ ಕುರಿತು ಸ್ಪೀಕರ್ ಅವರೊಂದಿಗೆ ಚರ್ಚಿಸುವುದಾಗಿ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಹಾಗೂ ಸ್ಪೀಕರ್ ಅಧಿಕಾರಿಗಳೊಂದಿಗೆ ತೆರಳಿ ಮಾಹಿತಿ ಪಡೆಯುವ ಚಿಂತನೆ ತಮ್ಮದಾಗಿದೆ. ಈ ಕುರಿತು ಸ್ಪೀಕರ್ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒಲವು ತಮ್ಮದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ನುಡಿದರು. ಬೆಳಗಾವಿಗೆ ಕಚೇರಿಗಳ ಸ್ಥಳಾಂತರ ಅವಶ್ಯವಾಗಿದೆ. ಆದರೆ ಸುವರ್ಣಸೌಧದಲ್ಲಿ ಕಚೇರಿಗಳಿಗೆ ಸ್ಥಳವಕಾಶ ಇಲ್ಲವಾಗಿದೆ ಎಂದರು.

ವಿಧಾನಪರಿಷತ್ತು ಸದನವನ್ನು ಕಾಲಮಿತಿಗೆ ಅನುಗುಣವಾಗಿ, ಆಯಾ ದಿನದ ಅಜೆಂಡಾ ಮುಗಿಸಲು ಒತ್ತು ನೀಡಲಾಗಿದೆ ಎಂದರು. ಪಶ್ನೋತ್ತರ ವೇಳೆ ಇತರೆ ಸದಸ್ಯರಿಗೆ ಉಪ ಪ್ರಶ್ನೆ ಕೇಳಲು ಅವಕಾಶ ನೀಡುತ್ತಿಲ್ಲ. ಸದನದ ಎಲ್ಲಾ ಸದಸ್ಯರು ಸಹಕಾರ ನೀಡುತ್ತಿದ್ದರಿಂದ ಇದು ಸಾಧ್ಯವಾಗುತ್ತಿದೆ ಎಂದರು. ವರ್ಷಕ್ಕೆ 60 ದಿನ ಅಧಿವೇಶನ ನಡೆಸಬೇಕಾಗಿದೆ. ಈ ಬಗ್ಗೆ ಸರಕಾರ ತೀರ್ಮಾನ ತೆಗೆದುಕೊಳ್ಳಬೇಕೆಂದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ