Breaking News

ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಪ್ರತಿಭಟನೆ

Spread the love

ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು.

ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.

ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ ಮಾಡಬೇಡಿ. ರಮೇಶ ಜಾರಕಿಹೋಳಿ ಹೊರಗಡೆ ಬಂದಂತೆ ಮಹಿಳೆ ಯಾಕೆ ಬರ್ತಿಲ್ಲಾ. ಇಲ್ಲಿಯ ತನಕ ಹೋಗದೆ ಇರುವ ಯುವತಿಯ ಮರ್ಯಾದೆ ಈಗ ಏಕೆ ಹೋಗುತ್ತಲಿದೆ ಎಂದು ಪ್ರಶ್ನಿಸಿದರು.

 

 

ಈ ವೇಳೆ ಪ್ರತಿಭಟನೆ ನಿರತರೊಬ್ಬರು ಮಾತನಾಡಿ, ಷಡ್ಯಂತ್ರ ಮಾಡುವವರು ಗೋಕಾಕಕ್ಕೆ ಬಂದು ಸ್ಪರ್ಧಿಸಬೇಕು ಎಂದು ಸವಾಲು ಎಸೆದರು.
ಪ್ರತಿಭಟನೆ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

Spread the loveಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ