Breaking News

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ..?

Spread the love

ಬೆಂಗಳೂರು,ಮಾ.14- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಜಾರಿಗೊಳಿಸುವ ಬಗ್ಗೆ ಈವರೆಗೂ ಯಾವುದೇ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ಕರೆದಿದ್ದಾರೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿಗಳ ಸೂಚನೆ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಸದ್ಯಕ್ಕೆ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಸಚಿವರು ಇದೇ ವೇಳೆ ನಿರಾಕರಿಸಿದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಿಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿರುವುದಕ್ಕೆ ವಿವರಣೆಯನ್ನು ಅವರ ಬಳಿಯೇ ಕೇಳಿ. ನನಗೂ ಅದಕ್ಕೂ ಸಂಬಂಧವಿಲ್ಲ ಎಂದರು.ಅವೇಶನದಲ್ಲಿ ಮತ್ತೆ ಸಿಡಿ ಪ್ರಕರಣ ಪ್ರಸ್ತಾಪಿಸಿದರೆ ಸರ್ಕಾರ ಉತ್ತರ ನೀಡಲಿದೆ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ