Breaking News

ಮಾರ್ಚ್ 15ರಿಂದ ಮಾರ್ಚ್ 30ರವರೆಗೆ ರಜೆ ಘೋಷಿಸಲಾಗಿದೆ ಎಂಬ ಸುತ್ತೋಲೆ ಹರಿದಾಡುತ್ತಿದೆ. ಆದರೆ ಇದೊಂದು ನಕಲಿ ಸುತ್ತೋಲೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕಾಲೇಜುಗಳಿಗೆ ಮಾರ್ಚ್ 15ರಿಂದ ಮಾರ್ಚ್ 30ರವರೆಗೆ ರಜೆ ಘೋಷಿಸಲಾಗಿದೆ ಎಂಬ ಸುತ್ತೋಲೆ ಹರಿದಾಡುತ್ತಿದೆ. ಆದರೆ ಇದೊಂದು ನಕಲಿ ಸುತ್ತೋಲೆಯಾಗಿದ್ದು, ರಜೆ ಘೋಷಣೆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಯಾರೋ ಕಿಡಿಗೇಡಿಗಳು ಸರ್ಕಾರದ ಆದೇಶ ಪ್ರತಿಯನ್ನು ನಕಲಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಮುಂಜಾಗೃತಾ ಕ್ರಮವಾಗಿ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದರೆ ಈ ಸುತ್ತೋಲೆ ನಕಲಿ. ಯಾರೂ ಕೂಡ ಈ ಸುತ್ತೋಲೆ ನಂಬಿ ಮೋಸ ಹೋಗಬೇಡಿ ಎಂದು ಉನ್ನತ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ