Breaking News

ಆ ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದ್ರೆ ಸಾಲದು; ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ : ಆ ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದರೆ ಸಾಲದು, ಅಧಿಕೃತವಾಗಿ ಮುಂದೆ ಬಂದು ತನಗಾದ ಅನ್ಯಾಯದ ಬಗ್ಗೆ ಹೇಳಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸಿಡಿ ಪ್ರಕರಣದ ಕುರಿತು ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಗೆ ಮುಂದೆ ಬಂದು ಹೇಳಿದ್ದಾರೋ ಹಾಗೆಯೇ ಆ ಯುವತಿ ಕೂಡ ಮುಂದೆ ಬಂದು ತನಗಾದ ಅನ್ಯಾಯದ ಬಗ್ಗೆ ಹೇಳಿಕೊಳ್ಳಬೇಕು ಆಗ ಮಾತ್ರ ಸಮಸ್ಯೆ ಬಗೆಹರಿಯುತ್ತದೆ ಎಂದರು.

ಆ ಯುವತಿಗೆ ವೇದಿಕೆಗಳಿವೆ, ಹೋರಾಟ ಮಾಡಬಹುದು. ಅದನ್ನು ಬಿಟ್ಟು ವಿಡಿಯೋ ಮಾಡಿ ಹೇಳಿಕೆ ನೀಡಿದ್ರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಯುವತಿ ಮುಂದೆ ಬಂದು ಹೇಳಿಕೆ ನೀಡಿದರೆ ಪೊಲೀಸರು ಸತ್ಯಾಂಶವನ್ನು ಕಂಡುಹಿಡಿಯಲು ಸಹಕಾರಿ ಆಗುತ್ತದೆ. ಎಲ್ಲೋ ಕುಳಿತು ವಿಡಿಯೋ ಕಳುಹಿಸಿದರೆ ಆಗುವುದಿಲ್ಲ. ಈಗಾಗಲೇ ರಮೇಶ್ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ಫಲಿತಾಂಶಕ್ಕೆ ಕಾಯುತ್ತಿದ್ದೇವೆ ಎಂದರು.


Spread the love

About Laxminews 24x7

Check Also

ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಕೂಲಿ ಕಾರ್ಮಿಕರು

Spread the loveಬೆಳಗಾವಿ ಹುಕ್ಕೇರಿ ತಾಲೂಕಿನ ಗೂಟುರ್ ಗ್ರಾಮ ಪಂಚಾಯತ್ ನರೇಗಾ ಕೂಲಿ ಕಾರ್ಮಿಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ