Breaking News

ನಾಡಗೀತೆಗೆ ಶೀಘ್ರದಲ್ಲೇ ಕತ್ತರಿ ಹಾಕುವ ಸಾಧ್ಯತೆ: ಸಚಿವ ಅರವಿಂದ ಲಿಂಬಾವಳಿ

Spread the love

ಗದಗ : ನಾಡಗೀತೆಗೆ ಶೀಘ್ರದಲ್ಲೇ ಕತ್ತರಿ ಹಾಕುವ ಸಾಧ್ಯತೆ ಇದೆ. ಈ ಬಗ್ಗೆ ಸಾಹಿತಿಗಳು ಮತ್ತು ತಜ್ಞರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾಡಗೀತೆ ಬಹಳ ಸುದೀರ್ಘವಾಗಿ ಇರುವುದರಿಂದ ಪುನರ್ ಪರಿಶೀಲನೆ ಮಾಡಿ ಶೀಘ್ರದಲ್ಲೇ ನಾಡಗೀತೆ ಕಡಿತಕ್ಕೆ ಚಿಂತನೆ ನಡೆದಿದೆ. ಈ ಬಗ್ಗೆ ಸಾಹಿತಿಗಳು ಮತ್ತು ತಜ್ಞರ ಸಭೆ ಕರೆದು ಶೀಘ್ರವೇ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ನಾಡಗೀತೆ ದೊಡ್ಡದಾಗಿರುವುದರಿಂದ ಹಿರಿಯ ವಯಸ್ಕರು ನಿಂತುಕೊಳ್ಳಲು ಕಷ್ಟ ಆಗುತ್ತಿದೆ. ಹೀಗಾಗಿ ಕಡಿಮೆ ಅವಧಿಯಲ್ಲಿ ನಾಡಗೀತೆ ಹಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆಗೆ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ