Breaking News
Home / ಜಿಲ್ಲೆ / ಬೆಂಗಳೂರು :7, 8 ಮತ್ತು 9ನೇ ತರಗತಿಯ ವಾರ್ಷಿಕ ಪರೀಕ್ಷೆಗಳು ರದ್ದು..!

ಬೆಂಗಳೂರು :7, 8 ಮತ್ತು 9ನೇ ತರಗತಿಯ ವಾರ್ಷಿಕ ಪರೀಕ್ಷೆಗಳು ರದ್ದು..!

Spread the love

ಬೆಂಗಳೂರು : ಕೊರೊನಾ ಸೋಂಕಿನ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಏಳು, ಎಂಟು ಮತ್ತು ಒಂಭತ್ತನೇ ತರಗತಿಯ ವಾರ್ಷಿಕ ಪರೀಕ್ಷೆಗಳನ್ನ ರದ್ದು ಮಾಡಲಾಗಿದ್ದು,ಈ ಮೂರು ವರ್ಗದ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣ (ಪಾಸ್) ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ‌

ಗುರುವಾರ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ,‌ಎಸ್.ಸುರೇಶ್ ಕುಮಾರ್ ಈ ಹಿಂದೆ ಒಂದರಿಂದ ಆರನೇ ತರಗತಿಯವರೆಗೆ ಮಕ್ಕಳನ್ನು ಪಾಸ್ ಮಾಡಲು ಸೂಚಿಸಲಾಗಿತ್ತು. ಆದರೆ ಈಗ ಏಳು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳನ್ನು ಕೂಡಾ ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಉತ್ತೀರ್ಣ ಮಾಡಲಾಗುವುದು ಎಂದು ಸ್ಪಷ್ಟ ಪಡಿಸಿದರು.

ಕೊರೊನಾ ವೈರಸ್​ ಹರಡುವ ಭೀತಿ ಹಿನ್ನೆಲೆ ಈ ಹಿಂದೆ 1 ರಿಂದ 6ನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ಗುರುವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ, ಈಗ 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಉತ್ತೀರ್ಣ​ ಮಾಡಬೇಕು ಎಂದು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಇನ್ನು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿದ್ಯಾರ್ಥಿಗಳಿಗೆ ಫಾರ್ಮೇಟೀವ್ (ರೂಪಣಾತ್ಮಕ), ಸಮ್ಮೇಟೀವ್( ಸಂಕಲನಾತ್ಮಕ) ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರ ಆಧಾರದ ಮೇಲೆ 10ನೇ ತರಗತಿಗೆ ಪಾಸ್ ಮಾಡಲಾಗುತ್ತದೆ.

ಈ ಎರಡು ಆಂತರಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇರುವ ವಿದ್ಯಾರ್ಥಿಗಳಿಗೆ ರಜಾ ಅವಧಿಯಲ್ಲಿ ಶಾಲೆಗಳು ಸೂಕ್ತ ಮಾರ್ಗದರ್ಶನ ನೀಡಿ, ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೂಕ್ತ ಪರೀಕ್ಷೆ ನಡೆಸಿ ಉತ್ತೀರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಈ ವರ್ಷ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸಲು ಇಚ್ಛಿಸಲಾಗಿತ್ತು. ಆದರೆ ಈ ಕೋವಿಡ್-19 ಕಳವಳದ ಸಂದರ್ಭದಲ್ಲಿ ಇದು ನಡೆಸಲು ಸಾಧ್ಯವಿಲ್ಲ. ಆ ಕಾರಣದಿಂದ ಎಂಟನೇ ತರಗತಿ ಆರಂಭವಾದ ಪ್ರಾರಂಭದಲ್ಲಿ ಮೌಲ್ಯಾಂಕನ ನಡೆಸಲಾಗುವುದು. ಎಸ್​ಎಸ್​​ಎಲ್​ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದೆ. ಏಪ್ರಿಲ್ 14ರ ನಂತರ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ