Breaking News

ರಮೇಶ್ ಜಾರಕಿಹೊಳಿ ಸದಾಶಿವ ನಗರದಲ್ಲಿರುವ ಮನೆ ಬದಲಿಸಿ ಮಲ್ಲೇಶ್ವರದ ಮಂತ್ರಿ ಅಪಾರ್ಟ್ ಮೆಂಟ್ ಗೆ ಶಿಫ್ಟ್ ?

Spread the love

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಂದೂವರೆ ವರ್ಷದ ಹಿಂದೆ ಖರೀದಿಸಿದ್ದ ಮನೆಯೇ ಅವರಿಗೆ ಮುಳುವಾಗಿದೆಯಾ? ಅವರ ಸಂಕಷ್ಟಗಳಿಗೆ ಈ ಹೊಸ ಮನೆಯ ವಾಸ್ತು ದೋಷವೇ ಕಾರಣವೇ ಎಂಬುದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಹೌದು, ರಮೇಶ್ ಜಾರಕಿಹೊಳಿ ಬೆಂಗಳೂರಿನ ಸದಾಶಿವನಗರದಲ್ಲಿ ಒಂದೂವರೆ ವರ್ಷದ ಹಿಂದೆ ಖರೀದಿಸಿದ್ದ ಮನೆಯನ್ನು ಇದೀಗ ಮಾರಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಈ ಪ್ರವೇಶಿಸಿದಾಗಿನಿಂದ ಅವರಿಗೆ ಒಂದಲ್ಲಾ ಒಂದು ಸಮಸ್ಯೆ ಕಾಡುತ್ತಿದ್ದು, ಸಂಕಷ್ಟಗಳಿಂದ ಹೊರಬರಲು ಅವರು ಈ ಮನೆ ಖರೀದಿಸಿದ್ದಾರೆ ಎನ್ನಲಾಗಿದೆ.

ಪ್ರತಿಷ್ಠೆಗಾಗಿ ಸದಾಶಿವ ನಗರದಲ್ಲಿ ಮನೆ ಖರೀದಿಸಿದ ರಮೇಶ್ ಜಾರಕಿಹೊಳಿ ಇಡೀ ಕುಟುಂಬ ಈ ಮನೆಯಲ್ಲಿ ವಾಸವಾಗಿತ್ತು. ಇದೀಗ ಈ ಮನೆಯನ್ನು 30 ಕೋಟಿ ರೂ.ಗೆ ಖರೀದಿಸಿದ್ದರು ಎಂದು ಹೇಳಲಾಗಿದೆ.

ಸಂಕಷ್ಟಗಳು ಎದುರಾದ ಹಿನ್ನೆಲೆಯಲ್ಲಿ ಮನೆಯ ವಾಸ್ತು ಪರಿಶೀಲಿಸಿದಾಗ ದೋಷ ಇರುವುದಾಗಿ ಜ್ಯೋತಿಷಿಗಳು ಹೇಳಿದ್ದು, ಮನೆ ಬದಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ರಮೇಶ್ ಜಾರಕಿಹೊಳಿ ಸದಾಶಿವ ನಗರದಲ್ಲಿರುವ ಮನೆ ಬದಲಿಸಿ ಮಲ್ಲೇಶ್ವರದ ಮಂತ್ರಿ ಅಪಾರ್ಟ್ ಮೆಂಟ್ ಗೆ ಶಿಫ್ಟ್ ಆಗಲು ಚಿಂತಿಸಿದ್ದು, ಈ ತಿಂಗಳಲ್ಲಿ ವಾಸಸ್ಥಾನ ಬದಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ