Breaking News

ಪಂಚಮಸಾಲಿ ಮೀಸಲಾತಿ ಹೋರಾಟ ತಾತ್ಕಾಲಿಕ ಮೊಟಕುಗೊಳಿಸಿ; ಸ್ವಾಮೀಜಿಗೆ ಶಾಸಕ ಯತ್ನಾಳ್ ಮನವಿ

Spread the love

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಮುಂದುವರೆದಿದೆ. ಈ ನಡುವೆ ಹೋರಾಟ ಕೈಬಿಡುವಂತೆ ಸ್ವತಃ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಶಾಸಕ ಯತ್ನಾಳ್, ಪಂಚಮಸಾಲಿ ಮೀಸಲಾತಿ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಎದ್ದು ನಿಂತ ಸಿಎಂ ಬಿ.ಎಸ್. ಯಡಿಯೂರಪ್ಪ ಮೀಸಲಾತಿಗೆ ಸಂಬಂಧಿಸಿದಂತೆ ಇನ್ನು 6 ತಿಂಗಳಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ, ಸಮಿತಿ ವರದಿ ತರಿಸಿಕೊಳ್ಳುತ್ತೇನೆ. ನಂತರ ಕಾನೂನಾತ್ಮಕವಾಗಿ ಮೀಸಲಾತಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ ಸ್ವಾಮೀಜಿಗಳು ಧರಣಿ ಕೈಬಿಡುವಂತೆ ಮನವಿ ಮಾಡಬೇಕು ಎಂದು ಹೇಳಿದರು.

ಆರಂಭದಲ್ಲಿ ಇದಕ್ಕೆ ಯತ್ನಾಳ್ ಒಪ್ಪದಿದ್ದಾಗ ಸಿಎಂ ಯಡಿಯೂರಪ್ಪ ಸ್ಪಷ್ಟ ಭರವಸೆ ನೀಡುತ್ತಿದ್ದೇನೆ. 6 ತಿಂಗಳಲ್ಲಿ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. ಸಿಎಂ ಭರವಸೆಗೆ ಮಣಿದ ಯತ್ನಾಳ್, 6 ತಿಂಗಳ ಕಾಲ ಪಂಚಮಸಾಲಿ ಮೀಸಲಾತಿ ಹೋರಾಟ ನಿಲ್ಲಿಸುವಂತೆ ಸದನದಿಂದಲೇ ಸ್ವಾಮೀಜಿಗೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಹೋರಾಟ ಕೈಬಿಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ