Breaking News

ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ

Spread the love

ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಅಮೇರಿಕಾದಲ್ಲಿ 1914ರಲ್ಲಿ ಮಹಿಳಾ ಕಾರ್ಮಿಕರು ಕೆಲಸ, ಸಮಾನ ವೇತನ, ಹೆರಿಗೆ ಸೌಲಭ್ಯ ಸೇರಿ ಇನ್ನಿತರೇ ಸೌಲಭ್ಯ ಕಲ್ಪಿಸುವಂತೆ ಹೋರಾಡಿ ಗೆದ್ದ ದಿನವನ್ನು ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದೆ ಬರಬೇಕು” ಎಂದು ತಿಳಿಸಿದರು.

“ಮಹಿಳೆಯರಿಗೆ ಶಿಕ್ಷಣ ಹಾಗೂ ಸಮಾನತೆ ಕೊಡಿಸಲು ಹೋರಾಟ ಮಾಡಿದ ಸಾವಿತ್ರಿಬಾಯಿ ಫುಲೆ, ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಇನ್ನಿತರ ಮಹನೀಯರನ್ನು ನಾವೆಲ್ಲರೂ ಸ್ಮರಿಸಬೇಕು” ಎಂದು ಹೇಳಿದರು.

ಕೇಂದ್ರ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಸುಂದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ, ರಾಜಶೇಖರ್ ಎಂ., ಸಹಾಯಕ ಪ್ರಾಧ್ಯಾಪಕಿ ಮಲ್ಲಮ್ಮ ಸೇರಿ ಇನ್ನಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಮಹಿಳಾ ಸಂಘಗಳಿಂದ ಏರ್ಪಡಿಸಿದ್ದ ವಸ್ತು ಪ್ರದರ್ಶನಕ್ಕೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ ನೀಡಿದರು.

ಪ್ರಿಯಾಂಕಾ ಅವರು ವಸ್ತು ಪ್ರದರ್ಶನದಲ್ಲಿನ ಎಲ್ಲ ಮಳಿಗೆಗಳಿಗೂ ಭೇಟಿ ನೀಡಿದರು. ಮಹಿಳಾ ಸಂಘಗಳ ಸದಸ್ಯರೇ ತಯಾರಿಸಿದ್ದ ವಿವಿಧ ಸಾಮಗ್ರಿಗಳನ್ನು ವೀಕ್ಷಿಸಿ, ವಸ್ತುಗಳು ಹಾಗೂ ಸಿದ್ಧಪಡಿಸುವ ಕುರಿತು ಮಾಹಿತಿ ಪಡೆದುಕೊಂಡರು.  


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ