Breaking News

ಪೆಟ್ರೋಲ್‌, ಡೀಸೆಲ್‌ ಜಿಎಸ್‌ಟಿ ವ್ಯಾಪ್ತಿಗೆ ಇಲ್ಲ: ನಿರ್ಮಲಾ ಸೀತಾರಾಮನ್‌

Spread the love

ನವದೆಹಲಿ: ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ವಿಮಾನ ಇಂಧನ (ಎಟಿಎಫ್) ಮತ್ತು ನೈಸರ್ಗಿಕ ಅನಿಲವನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಪ್ರಸ್ತಾವ ಈ ಹಂತದಲ್ಲಿ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

‘ಈ ಉತ್ಪನ್ನಗಳನ್ನು ಜಿಎಸ್‌ಟಿ ವ್ಯವಸ್ಥೆಯ ಅಡಿ ತರುವುದು ಯಾವಾಗಿನಿಂದ ಎಂಬ ಬಗ್ಗೆ ಜಿಎಸ್‌ಟಿ ಮಂಡಳಿ ಶಿಫಾರಸು ಮಾಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ, ರಾಜ್ಯಗಳಿಗೂ ಪ್ರಾತಿನಿಧ್ಯ ಇರುವ ಜಿಎಸ್‌ಟಿ ಮಂಡಳಿಯು ಇದುವರೆಗೆ ಈ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂಬ ಶಿಫಾರಸು ಮಾಡಿಲ್ಲ’ ಎಂದು ನಿರ್ಮಲಾ ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ವಿವರಿಸಿದ್ದಾರೆ.

ಆದಾಯ ಸಂಗ್ರಹದ ಮೇಲೆ ಆಗುವ ಪರಿಣಾಮ ಸೇರಿದಂತೆ ಎಲ್ಲ ಬಗೆಯ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು, ಈ ಉತ್ಪನ್ನಗಳನ್ನು ಯಾವಾಗಿನಿಂದ ಜಿಎಸ್‌ಟಿ ವ್ಯವಸ್ಥೆ ಅಡಿಯಲ್ಲಿ ತರಬಹುದು ಎಂಬುದನ್ನು ಜಿಎಸ್‌ಟಿ ಮಂಡಳಿಯು ಪರಿಶೀಲಿಸಬಹುದು ಎಂದೂ ಅವರು ತಿಳಿಸಿದ್ದಾರೆ.

ಲೀಟರ್‌ ಪೆಟ್ರೋಲ್‌ ಮೇಲಿನ ಎಕ್ಸೈಸ್ ಸುಂಕವು ಒಂದು ವರ್ಷದ ಹಿಂದೆ ₹ 19.98 ಇದ್ದಿದ್ದು ₹ 32.90ಕ್ಕೆ ಏರಿದೆ, ಡೀಸೆಲ್‌ ಮೇಲಿನ ಎಕ್ಸೈಸ್ ಸುಂಕವು ವರ್ಷದ ಹಿಂದೆ ₹ 15.83 ಇದ್ದಿದ್ದು ₹ 31.8ಕ್ಕೆ ಹೆಚ್ಚಳವಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಇನ್ನೊಂದು ಪ್ರಶ್ನೆಗೆ ಉತ್ತರವಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ