Breaking News

ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆ ದಾಖಲಿಸಿಕೊಂಡ SIT

Spread the love

ಬೆಂಗಳೂರು: CD ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಯನ್ನ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಐಒ ಎಸಿಪಿ ಧರ್ಮೇಂದ್ರ ಅವರು ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ನನಗೆ ನಾಲ್ಕು ತಿಂಗಳಿಂದ ಬ್ಲಾಕ್ ಮೇಲ್ ಮಾಡಲಾಗ್ತಿತ್ತು. ಹಣ ನೀಡಿ.. ಇಲ್ಲದಿದ್ರೆ ನಿನ್ನನ್ನ ರಾಜಕೀಯವಾಗಿ ಮುಗಿಸ್ತೀವಿ ಅಂತಾ ಆಪ್ತ ನಾಗರಾಜ್ ಮೂಲಕ ಬ್ಲ್ಯಾಕ್ ಮೇಲ್ ಮಾಡಿದ್ದರು. ಆದರೆ ನಾನು ಅವರ ಒತ್ತಾಯಕ್ಕೆ ಮಣಿದಿಲ್ಲ ಅಂತಾ ಕಳೆದ ನಾಲ್ಕು ತಿಂಗಳಿನಿಂದ ನಡೆದ ಎಲ್ಲಾ ವಿಚಾರಗಳ ಬಗ್ಗೆ ಎಸ್​ಐಟಿ ಅಧಿಕಾರಿಗಳ ಮುಂದೆ ರಮೇಶ್​​ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೇ ತಾವು ನೀಡಿರುವ ದೂರಿಗೆ ಸಂಬಂಧಿಸಿದ ಎಲ್ಲಾ ಹೇಳಿಕೆಗಳನ್ನೂ ರಮೇಶ್​ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Spread the loveಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು  ಸಿಂಗಾಪುರ್‌ಗಿಂತಲೂ ಉತ್ತಮವಾದ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡೋದಾಗಿ ಸಾರಿಗೆ ಸಚಿವ ರಾಮಲಿಂಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ