Breaking News
Home / ರಾಜ್ಯ / ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಬಸವರಾಜ್ ಬೊಮ್ಮಾಯಿ ಮಾಹಿತಿ!

ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಬಸವರಾಜ್ ಬೊಮ್ಮಾಯಿ ಮಾಹಿತಿ!

Spread the love

ಬೆಂಗಳೂರು, ಮಾ. 16: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಕಳೆದ ಬಾರಿ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ನಾವು ಜಯ ಗಳಿಸಿದ್ದೆವು. ನಂತರ ರಾಜರಾಜೇಶ್ವರಿನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೂಡ ಬಿಜೆಪಿ ಅಭರ್ಥಿ ದಾಖಲೆ ಮತಗಳ ಅಂತರದಿಂದ ಜಯ ಗಳಿಸಿದ್ದರು. ಈಗ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬೆಳಗಾವಿ ಲೋಕಸಭೆ ಕ್ಷೇತ್ರದ ಜನತೆ ಈಗಾಗಲೇ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂದರ್ಭದಲ್ಲಿ ಸೇರಿದ್ದ ಅಪಾರ ಜನಸ್ತೋಮವೇ ಇದಕ್ಕೆ ನಿದರ್ಶನ ಎಂದು ಬೊಮ್ಮಾಯಿ ತಿಳಿಸಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ