Breaking News

ಜಾರಕಿಹೊಳಿ ಸಿಡಿ ಪ್ರಕರಣ: ಯುವತಿಗೆ ನೋಟಿಸ್ ಜಾರಿ, ಆಕೆಯಿಂದ ಸ್ಪಂದನೆ ಇಲ್ಲ

Spread the love

ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಅಧಿಕಾರಿಗಳು ಸೋಮವಾರ 2 ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಸೋಮವಾರ ತಡರಾತ್ರಿ ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿ ವಿಚಾರಣೆಗೆ ನಡೆಸಿದ್ದು, ಎಸ್‍ಐಟಿ ಪೊಲೀಸರ ಎದುರು 4 ಪುಟಗಳ ಹೇಳಿಕೆ ದಾಖಲಿಸಿದ್ದು, ಈತನಿಗೆ ಸಮಯದಲ್ಲಿ ಎಸಿಪಿ ಧರ್ಮೆಂದ್ರ ಎದುರು ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ರಾಜಕೀಯ ಷಡ್ಯಂತ್ರ, ಬ್ಲ್ಯಾಕ್‍ಮೇಲ್ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.

ಆ ಹೇಳಿಕೆಯಲ್ಲಿ, ನನ್ನ ವಿರುದ್ಧ ಕಳೆದ 4 ತಿಂಗಳಿಂದ ಬ್ಲ್ಯಾಕ್‍ಮೇಲ್ ನಡೆಯುತ್ತಿತ್ತು. ನಿನ್ನನ್ನು ರಾಜಕೀಯವಾಗಿ ಅಂತ್ಯಗೊಳಿಸಲಾಗುವುದು ಎಂದು ಧಮ್ಕಿ ಹಾಕಿದ್ದರು. ನನ್ನ ಆಪ್ತನ ಮೂಲಕ ಹಣಕ್ಕಾಗಿ ನನ್ನ ಮೇಲೆ ಒತ್ತಡ ಹಾಕಿದ್ದರು. ಆದರೆ, ನಾನು ಆ ಒತ್ತಡಕ್ಕೆ ಮಣಿದಿರಲಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ 4 ತಿಂಗಳಿಂದ ನಡೆಯುತ್ತಿದ್ದ ಷಡ್ಯಂತ್ರದ ಬಗ್ಗೆ ಎಸ್‍ಐಟಿಗೆ ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ನೋಟಿಸ್ ನೀಡಿದ್ದರೂ, ಆಕೆ ಇದುವರೆಗೂ ಪೊಲೀಸರಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ರಕ್ಷಣೆ ಕೋರಿ ಅಜ್ಞಾತ ಸ್ಥಳದಿಂದ ಯುವತಿ ವಿಡಿಯೋ ವೊಂದನ್ನು ಹರಿಬಿಟ್ಟಿದ್ದಳು. ಬಳಿಕ ಕಬ್ಬನ್ ಪಾರ್ಕ್ ಪೊಲೀಸರು ವಿಚಾರಣೆ ಹಾಜರಾಗುವಂತೆ ಯುವತಿಯ ಮನೆಗೆ ನೋಟಿಸ್​ ಅಂಟಿಸಿದ್ದರು.

ನೀವು ನಿಗದಿ ಮಾಡಿದ ದಿನಾಂಕ, ಸಮಯ, ಸ್ಥಳದಲ್ಲೇ ಹೇಳಿಕೆ ಪಡೆದುಕೊಳ್ಳುವುದಾಗಿ ಪೊಲೀಸರು ನೋಟಿಸ್ ನಲ್ಲಿ ಉಲ್ಲೇಖಿಸಿದ್ದು, ನೋಟಿಸ್​ ಜಾರಿಗೊಳಿಸಿದ ಕಬ್ಬನ್ ಪಾರ್ಕ್ ಠಾಣೆಯ ಇನ್ಸ್​ಪೆಕ್ಟರ್​, ತಮ್ಮ ದೂರವಾಣಿ ಸಂಖ್ಯೆ, ಇ-ಮೇಲ್ ಐಡಿ ಎಲ್ಲವನ್ನೂ ನೀಡಿ ಯುವತಿಗೆ ಇ-ಮೇಲ್ ಮಾಡಿದ್ದರು. ಇಷ್ಟೆಲ್ಲಾ ಅವಕಾಶಗಳನ್ನು ಹಾಗೂ ಹಾದಿಗಳನ್ನು ನೀಡಿದ್ದರು, ಇದುವರೆಗೂ ಯುವತಿ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಹೇಳಲಾಗುತ್ತಿದೆ.

 

https://youtu.be/kyxoU5IIGfs


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ