ಬೆಂಗಳೂರು : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.
ಪ್ರಕರಣ ಸಂಬಂಧ ವಿನಯ್ ಜಿಲ್ಲಾ ಸಿಬಿಐ ವಿಶೇಷ ನ್ಯಾಯಾಲಯ ಸೇರಿದಂತೆ ಹೈಕೋರ್ಟ್ ನಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಎಲ್ಲಾದರಲ್ಲೂ ಅರ್ಜಿ ವಜಾ ಆಗಿದೆ. ಹಾಗಾಗಿ ಮಾಜಿ ಸಚಿವರು ಜನಪ್ರತಿನಿಧಿಗಳ ಕೋರ್ಟ್ ಮೊರೆ ಹೋಗಿದ್ದರು.
ಅರ್ಜಿ ಸಂಬಂಧ ವಾದ ಪ್ರತಿವಾದ ಆಲಿಸಿದ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿ ತೀರ್ಪು ಪ್ರಕಟಿಸಿದೆ. ಆದರೆ ಇಲ್ಲಾದರೂ ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವರಿಗೆ ಮತ್ತೆ ನಿರಾಸೆಯಾಗಿದೆ.
https://youtu.be/kyxoU5IIGfs
Laxmi News 24×7