ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಅಖಾಡ ರಂಗೇರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳ ಲಾಬಿ ಆರಂಭವಾಗಿದೆ. ಈ ನಡುವೆ ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆಗೆ ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಲೋಕಸಭಾ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ನಾನು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ. ಈಗಾಗಲೇ ಮೂರರಿಂದ ನಾಲ್ಕು ಜನರ ಹೆಸರು ಚಾಲ್ತಿಯಲ್ಲಿದೆ ಇದರಲ್ಲಿ ನಾನೂ ಒಬ್ಬ ಎಂದರು.
ಟಿಕೆಟ್ ವಿಚಾರವಾಗಿ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಎರಡು ಮೂರು ದಿನಗಳಲ್ಲಿ ಫೈನಲ್ ಆಗಲಿದೆ ಎಂದು ಹೇಳಿದರು.
Laxmi News 24×7