Breaking News

ಬೆಳಗಾವಿ ಜಿಲ್ಲೆಯಲ್ಲಿ ಇಂದು 24 ಕೊರೊನಾ ಕೇಸ್ ಪತ್ತೆ..ಸದಾಶಿವನಗರ ಈಗ ಮೈಕ್ರೋ ಕಂಟೇನ್ಮೆಂಟ್ ಪ್ರದೇಶ

Spread the love

ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಜಿಲ್ಲೆಯ್ಲಿ ಇಂದು ಒಟ್ಟು 24 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಇದರಿಂದ ಕುಂದಾನಗರಿ ಜನರಲ್ಲಿ ಆತಂಕ ಮನೆ ಮಾಡಿದೆ.

ಹೌದು ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಮಹಾಮಾರಿ ಕೊರೊನಾ ವಕ್ಕರಿಸಿಕೊಂಡಿದೆ. ಇದರಲ್ಲಿ ಸದಾಶಿವನಗರದಲ್ಲಿಯೇ 7 ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿರುವ ಹಿನ್ನೆಲೆ ಸರ್ಕಾರದ ಆದೇಶದಂತೆ ಮೈಕ್ರೋ ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದ್ದು. ಸದಾಶಿವನಗರದ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕ್ಲೋರಿನ್ ದ್ರಾವಣ ಸಿಂಪಡಣೆ ಮಾಡಲಾಗಿದೆ. ಇನ್ನು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದ್ದು. ಯಾವುದೇ ರೀತಿ ಸೋಂಕು ಹರಡದಂತೆ ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.

ಅದೇ ರೀತಿ ಟಿಳಕವಾಡಿ-2, ರಾಮತೀರ್ಥನಗರ-2, ವಡಗಾವಿ-1, ಭಾಗ್ಯನಗರ-1, ಆಂಜನೇಯ ನಗರ-1, ಬೆಳಗಾವಿ ಗ್ರಾಮೀಣ-3, ರಾಯಬಾಗ-3, ಗೋಕಾಕ್-2, ಚಿಕ್ಕೋಡಿ-1, ಇತರೆ-1 ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ.


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ