Breaking News

ಸಾಹುಕಾರ್ ಸಿಡಿ ಪ್ರಕರಣ – ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಯುವತಿ ಸಹೋದರರು

Spread the love

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಎಸ್ ಐಟಿ ತನಿಖೆ ಚುರುಕುಗೊಂಡಷ್ಟು ಸ್ಫೋಟಕ ಮಾಹಿತಿಗಳು ಹೊರಬರುತ್ತಲೇ ಇದೆ. ಇದೀಗ ಸಿಡಿಯಲ್ಲಿರುವ ಯುವತಿಯ ಸಹೋದರರು ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಾಯ್ಬಿಟ್ಟಿದ್ದಾರೆ.

ಯುವತಿಯ ತಂದೆ ತಮ್ಮ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ಎರಡು ದಿನಗಳ ಹಿಂದೆ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಯುವತಿಯ ಮನೆಯವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಯುವತಿಯ ಸಹೋದರರು ತಮ್ಮ ಸಹೋದರಿಗೆ ಹಲವು ರಾಜಕಾರಣಿಗಳ ಸಂಪರ್ಕವಿರುವುದಾಗಿ ತಿಳಿಸಿದ್ದಾರೆ. ಸಹೋದರಿಗೆ ಹಲವು ರಾಜಕಾರಣಿಗಳು ನಿರಂತರವಾಗಿ ಕರೆ ಮಾಡುತ್ತಿದ್ದರು. ಈ ಬಗ್ಗೆ ಸ್ವತ: ಸಹೋದರಿ ಹೇಳಿದ್ದಳು ಎಂದು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಯುವತಿಗೆ ಹಲವು ರಾಜಕಾರಣಿಗಳು ಕರೆ ಮಾಡುತ್ತಿರುವುದು ನಿಜವೇ ಆಗಿದ್ದರೆ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುವುದರಲ್ಲಿ ಸಂಶಯವಿಲ್ಲ. ಯುವತಿಗೆ ಕರೆ ಮಾಡುತ್ತಿರುವ ರಾಜಕಾರಣಿಗಳು ಯಾರು? ಯಾವ ಕಾರಣಕ್ಕಾಗಿ ಕರೆ ಮಾಡುತ್ತಿದ್ದರು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇದೀಗ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ