Breaking News

ಹೆಚ್ಚಿದ ಕೊರೋನಾ: ಶಾಲಾ-ಕಾಲೇಜುಗಳಿಗೆ ರಜೆ, ಪರೀಕ್ಷೆ ಮುಂದೂಡಿಕೆ

Spread the love

ಅಹಮದಾಬಾದ್: ಗುಜರಾತ್ ನಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 8 ಮಹಾನಗರಗಳ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಅಹಮದಾಬಾದ್, ವಡೋದರಾ, ಸೂರತ್, ರಾಜಕೋಟ್ ಸೇರಿದಂತೆ 8 ಮಹಾನಗರಗಳ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಆನ್ಲೈನ್ ತರಗತಿ ನಡೆಯಲಿದ್ದು, ಶುಕ್ರವಾರದಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಏಪ್ರಿಲ್ ನಲ್ಲಿ ನಡೆಸಲಾಗುವುದು ಎಂದು ಗುಜರಾತ್ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯಮಂತ್ರಿ ವಿಜಯ ರೂಪಾನಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಹಮದಾಬಾದ್ ನಲ್ಲಿ ಸಿಟಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಉದ್ಯಾನವನ, ಮೃಗಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ