Breaking News

ಅಮಾನತುಗೊಂಡ ಪೊಲೀಸ್ ಅಧಿಕಾರಿ ಬಳಿ ಮತ್ತೆರಡು ಲಕ್ಸುರಿ ಕಾರು ಪತ್ತೆ

Spread the love

ಮುಂಬಯಿ: ಅಮಾನತುಗೊಂಡಿರುವ ಮುಂಬಯಿ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಸಂಬಂಧಪಟ್ಟ ಇನ್ನೆರಡು ಲಕ್ಸುರಿ ಕಾರುಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್ ಐಎ) ವಶಪಡಿಸಿಕೊಂಡಿದೆ.

ಎನ್ ಐಎ ಮೂಲಗಳ ಪ್ರಕಾರ ಟೊಯೊಟಾ ಲ್ಯಾಂಡ್ ಕ್ರೂಸರ್ ಪ್ರಡೊ ಕಾರು ವಾಜೆ ನಿವಾಸದಲ್ಲಿ ಪತ್ತೆಯಾಗಿದೆ. ಮರ್ಸಡೀಸ್ ಕಾರನ್ನು ಕೂಡ ಸಚಿನ್ ಮನೆಯಿಂದ ವಶಕ್ಕೆ ಪಡೆಯಲಾಗಿದೆ. ಇದುವರೆಗೆ ಒಟ್ಟು ಐದು ಲಕ್ಸುರಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ವಾಜೆ ಜತೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ಕೂಡ ಎನ್ ಐಎ ವಿಚಾರಣೆಗೆ ಕರೆದಿದೆ.

ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಹೊರಗಡೆ ಭದ್ರತಾ ವೈಫಲ್ಯ ಉಂಟಾದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಎನ್ ಐಎ ತಂಡವು ಸಚಿನ್ ವಾಜೆಯನ್ನು ಬಂಧಿಸಿತ್ತು.

ಅಂಬಾನಿ ನಿವಾಸದ ಮುಂದೆ ಬಾಂಬ್ ಭೀತಿ ಎದುರಾದ ಹಿನ್ನೆಲೆಯಲ್ಲಿ ಮುಂಬಯಿ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ನ್ನು ಮಹಾರಾಷ್ಟ್ರ ಸರ್ಕಾರವು ಹೋಮ್ ಗಾರ್ಡ್ ಗೆ ವರ್ಗಾವಣೆ ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನರ್ಗಲೆ ಅವರನ್ನು ಮುಂಬಯಿ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ