Breaking News

ಪ್ರತಿಭಟನಾನಿರತ ರೈತರಿಗೂ ಲಸಿಕೆ ನೀಡಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌

Spread the love

ನವದೆಹಲಿ: ದೆಹಲಿಯ ಗಡಿಗಳಲ್ಲಿ 111 ದಿನಗಳಿಂದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೋವಿಡ್‌ ಲಸಿಕೆ ನೀಡಬೇಕೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಗುರುವಾರ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಅವರು, ‘ದೇಶದಾದ್ಯಂತ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಪ್ರತಿಭಟನಾ ಸ್ಥಳದಲ್ಲಿಯೇ ಮುನ್ನೆಚ್ಚರಿಕಾ ಕ್ರಮವಾಗಿ ಸಮಾಜಿಕ ಅಂತರ ಹಾಗೂ ಕೊರೊನಾ ಸಂಬಂಧಿ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹೋರಾಟದಲ್ಲಿ ಪಾಲ್ಗೊಂಡಿರುವ ರೈತರಿಗೆ ಸರ್ಕಾರವು ಲಸಿಕೆ ನೀಡಬೇಕು. ನಾನು ಕೂಡ ಲಸಿಕೆ ಪಡೆಯುತ್ತೇನೆ’ ಎಂದು ಹೇಳಿದ್ದಾರೆ.

‘ಕೋವಿಡ್‌ ಭಯದಿಂದ ನಾವು ಪ್ರತಿಭಟನೆಯನ್ನು ಕೊನೆಗೊಳಿಸುವುದಿಲ್ಲ. ಅದಕ್ಕೆ ಬೇಕಾದ ಸೂಕ್ತ ಪರಿಹಾರಗಳನ್ನು ಹಾಗೂ ಕ್ರಮಗಳನ್ನು ತೆಗೆದುಕೊಂಡು ಮುಂದುವರಿಸುತ್ತೇವೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವವರೆಗೂ ನಾವು ಹೋರಾಟವನ್ನು ಕೈಬಿಡುವುದಿಲ್ಲ’ ಎಂದು ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ವರ್ಷ ನವೆಂಬರ್ 28 ರಿಂದ ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತ ಒಕ್ಕೂಟಗಳೊಂದಿಗೆ ಸರ್ಕಾರ 11 ಸುತ್ತಿನ ಮಾತುಕತೆ ನಡೆಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ