Home / ರಾಜ್ಯ / ಶಿವಸೇನಾ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ: ಕಂದಾಯ ಸಚಿವ ಅಶೋಕ್

ಶಿವಸೇನಾ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ: ಕಂದಾಯ ಸಚಿವ ಅಶೋಕ್

Spread the love

ಬೆಳಗಾವಿ: ‘ರಾಜ್ಯದಲ್ಲಿ ಶಿವಸೇನಾದವರ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕಂದಾಯ ಸಚಿವ ಆರ್. ಅಶೋಕ್‌ ತಿಳಿಸಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶಿವಸೇನಾದವರು ನಿರಂತರವಾಗಿ ಪುಂಡಾಟಿಕೆ ನಡೆಸುತ್ತಿರುವುದನ್ನು ಗಮನಿಸಿದ್ದೇವೆ. ಕಠಿಣ ಕ್ರಮದ ಮೂಲಕ ಅದನ್ನು ನಿಲ್ಲಿಸಲೇಬೇಕಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗೆ ಸೂಚನೆ ಕೊಡಲಾಗಿದೆ. ಅಂಥವರನ್ನು ಮಟ್ಟ ಹಾಕಬೇಕು. ಆಗ ಮಾತ್ರ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ’ ಎಂದರು.

‘ಬೆಳಗಾವಿಯಲ್ಲಿ ಬಹಳ ಜನ ಮರಾಠಿ ಭಾಷಿಗರಿದ್ದಾರೆ. ಅವರು ಶಾಂತಿ ಬಯಸುತ್ತಾರೆ. ಕೆಲವರು ಪುಂಡಾಟ ಮಾಡುತ್ತಿದ್ದಾರೆ. ಅವರಿಗೆ ಸರಿಯಾದ ಪಾಠ ಕಲಿಸಲಾಗುವುದು. ಎಬಿಸಿಡಿಯಿಂದ ಹಿಡಿದು ಕನ್ನಡ ಅಕ್ಷರ ಮಾಲೆಯನ್ನೆಲ್ಲಾ ಅವರಿಗೆ ಕಲಿಸಿಕೊಡುತ್ತೇವೆ’ ಎಂದು ಹೇಳಿದರು.

‘ಶಿವಸೇನಾ ಒಂದು ರಾಜಕೀಯ ಪಕ್ಷ. ಅದನ್ನು ನಿಷೇಧಿಸಲು ಕಾನೂನಿನಲ್ಲಿ ಅವಕಾಶ ಇದೆಯೋ, ಇಲ್ಲವೋ ನನಗೆ ಗೊತ್ತಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.

‘ಬೆಳಗಾವಿ ಸೇರಿದಂತೆ ಗಡಿ ರಕ್ಷಣೆ ವಿಷಯದಲ್ಲಿ ರಾಜಿ ಮಾಡುವುದಿಲ್ಲ. ನೆಲ, ಜಲ ಸಂರಕ್ಷಣೆಗೆ ಯಾವುದೇ ಬೆಲೆ ಬೇಕಾದರೂ ತೆರುವುದಕ್ಕೆ ನಮ್ಮ ಸರ್ಕಾರ ಸಿದ್ಧವಿದೆ’ ಎಂದು ತಿಳಿಸಿದರು.

ಮೂವರ ಹೆಸರು ಶಿಫಾರಸು: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ವಿಷಯದಲ್ಲಿ ಚರ್ಚೆಯಾಗಿದೆ. ನಾನೂ ಆ ಸಮಿತಿಯಲ್ಲಿದ್ದು, ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಚರ್ಚಿಸಿದ್ದೇನೆ. ಯಾರಿಗೆ ಕೊಟ್ಟರೆ ಒಳ್ಳೆಯದು ಎಂದು ತಿಳಿಸಿದ್ದೇನೆ. ಟಿಕೆಟ್ ರೇಸಲ್ಲಿ ದಿವಂಗತ ಸುರೇಶ ಅಂಗಡಿ ಕುಟುಂಬದವರು ಸೇರಿ ಬಹಳ ಜನರು ಇದ್ದಾರೆ. ಕ್ಷೇತ್ರವು ನಮ್ಮದಾಗಿರುವುದರಿಂದ, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ನೋಡೋಣ’ ಎಂದು ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ