Breaking News

ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಕೈ ಕೈ ಮಿಲಾಯಿಸಿದ ಮುಖಂಡರು

Spread the love

ಮಳವಳ್ಳಿ: ‘ಸರ್ಕಾರದ ನಡೆ ಗ್ರಾಮದ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಸಮ್ಮುಖದಲ್ಲೇ ಶನಿವಾರ ಕಾಂಗ್ರೆಸ್‌-ಜೆಡಿಎಸ್‌ ಸದಸ್ಯರು ಮಾತಿನ ಚಕಮಕಿ ನಡೆದಿ ಕೈಕೈ ಮಿಲಾಯಿಸಲು ಮುಂದಾದರು.

‌ತಾಲ್ಲೂಕಿನ ಬಿಜಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ತಾ.ಪಂ.ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡುತ್ತಾ ಮಾಜಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹೆಸರು ಪ್ರಸ್ತಾಪಿಸಿದರು. ಬಹು ನಿರೀಕ್ಷಿತ ಪೂರಿಗಾಲಿ ಹನಿ ನೀರಾವರಿ ಕಾಮಗಾರಿ ಕುಂಠಿತವಾಗಿದ್ದು, ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಡಾ.ಕೆ.ಅನ್ನದಾನಿ, ಇದು ಸರ್ಕಾರಿ ಕಾರ್ಯಕ್ರಮ. ಇಲ್ಲಿ ಬೇರೆ ವಿಚಾರ ಬೇಡ ಎಂದು ಎದ್ದು ನಿಂತರು. ಶಾಸಕರ ಆಕ್ಷೇಪಕ್ಕೆ ಜಿ.ಪಂ. ಸದಸ್ಯೆ ಸುಜಾತಾ ಕೆ.ಎಂ.ಪುಟ್ಟು, ಸುಜಾಾ ಸುಂದ್ರಪ್ಪ, ಜಯಕಾಂತ ಅಂಕರಾಜು, ಸುಷ್ಮಾರಾಜು, ತಾ.ಪಂ.ಉಪಾಧ್ಯಕ್ಷ ಸಿ.ಮಾಧು, ಸದಸ್ಯ ವಿ.ಪಿ.ನಾಗೇಶ್ ವಿರೋಧ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರ ನಡುವೆ ತಳ್ಳಾಟ ನಡೆಯಿತು. ವೇದಿಕೆಯಲ್ಲಿದ್ದ ಸಚಿವ ಕೆ.ಸಿ.ನಾರಾಯಣಗೌಡ ಅವರು ಕೈ ಮುಗಿದು ಸುಮ್ಮನಿರಿ ಎಂದು ಮನವಿ ಮಾಡಿದರು. ಪರಿಸ್ಥಿತಿ ಕೈ ಮೀರುವ ಹಂತದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಹತೋಟಿಗೆ ತಂದರು.

‘ಇಂತಹ ಒಳ್ಳೆಯ ಕಾರ್ಯಕ್ರಮದಲ್ಲಿ ಗದ್ದಲ ನಡೆದಿರುವುದು ವಿಷಾದನೀಯ. ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕೀಯ ತರಬಾರದು’ ಎಂದು ಸಚಿವ ನಾರಾಯಣಗೌಡ ಹೇಳಿದರು.


Spread the love

About Laxminews 24x7

Check Also

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

Spread the loveನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ