ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐಟಿ ತಂಡ ವಿಡಿಯೋದಲ್ಲಿರುವ ಯುವತಿಗಾಗಿ ತೀವ್ರ ಶೋಧ ನಡೆಸುತ್ತಿದೆ.
ಯುವತಿ ಅಪಹರಣ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಶನಿವಾರ ಬೆಳಗಾವಿಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಯುವತಿ ಕುಟುಂಬದವರು ವಾಸವಿದ್ದ ಬಾಡಿಗೆ ಮನೆಗೆ ಆಗಮಿಸಿದ್ದ ಎಸ್ ಐಟಿ ಅಧಿಕಾರಿಗಳ ತಂಡ ಮನೆ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ಸಿಡಿಯಲ್ಲಿ ಇದ್ದಾಳೆ ಎನ್ನಲಾದ ಯುವತಿಯ ತಂದೆ ಮಾರ್ಚ್ 16 ರಂದು ಬೆಳಗಾವಿ ನಗರದ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ಬಳಿಕ ಬೆಳಗಾವಿ ಪೊಲೀಸರು ಈ ದೂರನ್ನು ಬೆಂಗಳೂರು ನಗರದ ಆರ್.ಟಿ. ನಗರ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ತನಿಖೆಯ ಕುರಿತಾಗಿ ಸಂತ್ರಸ್ತೆಯ ಪಾಲಕರ ಶೋಧನೆ ಮತ್ತು ವಿಚಾರಣೆಗಾಗಿ ಬೆಳಗಾವಿ ನಗರಕ್ಕೆ ಬಂದಿದ್ದಾರೆ.
Laxmi News 24×7