Breaking News

ವಿಜಯಪುರದ ‘BSNL’ ಕಚೇರಿ ಮೇಲೆ ‘CBI’ ಅಧಿಕಾರಿಗಳ ದಾಳಿ ; ಮಹತ್ವದ ದಾಖಲೆಗಳು ವಶಕ್ಕೆ

Spread the love

ವಿಜಯಪುರ : ನಗರದ ಬಿಎಸ್‌ಎನ್‌ಎಲ್ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದ ಬಸವೇಶ್ವರ ವೃತ್ತದ ಬಳಿಯಿರುವ ಬಿ ಎಸ್ ಎನ್ ಎಲ್ ಕಚೇರಿ ಮೇಲೆ ದಾಳಿ ನಡೆಸಿದೆ. ಫೈಬರ್ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮ ಎಸಗಿರುವ ಆರೋಪದ ಮೇರೆಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಕೇಂದ್ರದ ಡಿಜಿಟಲ್ ಇಂಡಿಯಾ ಯೋಜನೆಯಡಿ ಫೈಬರ್ ಕೇಬಲ್ ಗಳನ್ನು ಅಳವಡಿಕೆ ಮಾಡಲಾಗಿತ್ತು, ಗ್ರಾ.ಪಂ ಗೆ ಫೈಬರ್ ಕೇಬಲ್ ಸಂಪರ್ಕ ನೀಡಬೇಕಿದ್ದ ಬಿ ಎಸ್ ಎನ್ ಎಲ್ ಅಧಿಕಾರಿಗಳು ಕೆಲವು ಗ್ರಾ ಪಂಚಾಯತಿಗೆ ಮಾತ್ರ ಸಂಪರ್ಕ ಕಲ್ಪಿಸಿದ್ದರು,ಅಲ್ಲದೇ ಸಂಪರ್ಕ ಕಲ್ಪಿಸದೇ ಹಲವು ಕಡೆ ಬಿಲ್ ಪಾವತಿಸಿದ್ದರು ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೆ SIT ರಚನೆ: ಪ್ರಿಯಾಂಕ್ ಖರ್ಗೆ

Spread the loveಬೆಂಗಳೂರು: ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಫಾರ್ಮ್-7 ದುರ್ಬಳಕೆ ಬಗ್ಗೆ ವಿಶೇಷ ತನಿಖಾ ತಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ