Breaking News

ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ‘ಸಿಎಂ ಬದಲಾವಣೆ, ಉ.ಕರ್ನಾಟಕ ವ್ಯಕ್ತಿ ಮುಂದಿನ ಸಿಎಂ : ಯತ್ನಾಳ್

Spread the love

ವಿಜಯಪುರ : ಇದೀಗ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಕಾವಿದೆ. ಇಂತಹ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುತ್ತಲೇ ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ಆದ್ರು.. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉತ್ತರ ಕರ್ನಾಟಕ ಭಾಗದವರಿಗೆ ಮುಖ್ಯಮಂತ್ರಿ ಅವಕಾಶ ಇದೆ ಎಂದು ಮಾತ್ರವೇ ಗೊತ್ತಿದೆ. ಆದ್ರೇ ಅದರಲ್ಲಿ ನನ್ನ ಹೆಸರು ಇರುವ ಬಗ್ಗೆ ಖಚಿತ ಮಾಹಿತಿ ಇಲ್ಲ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುತ್ತಲೇ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಷಯವಾಗಿ ನನಗೆ ರಾಷ್ಟ್ರೀಯ ಅಧ್ಯಕ್ಷರು, ಗೃಹ ಸಚಿವರು ಹಾಗೂ ಹೈಕಮಾಂಡ್ ನಿಂದಲೇ ಖಚಿತ ಮಾಹಿತಿ ಇದೆ. ಮುಖ್ಯಮಂತ್ರಿ ಬದಲಾವಣೆ ನಂತ್ರ, ಉತ್ತರ ಕರ್ನಾಟಕದ ಭಾಗದವರಿಗೆ ಸಿಎಂ ಆಗುವ ಅವಕಾಶ ಇದೆ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ