Breaking News

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಸಚಿವ ಬಸವರಾಜ ಬೊಮ್ಮಾಯಿ

Spread the love

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಧಾರವಾಡದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಸ್ ಐ ಟಿ ಸಿಡಿ ತನಿಖೆಯನ್ನು ನಿಷ್ಪಕ್ಷಪಾತ, ನಿಷ್ಠುರ, ನ್ಯಾಯಸಮ್ಮತವಾಗಿ ನಡೆಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಲಾಗುತ್ತಿದೆ. ಶಾಲಾ ಕಾಲೇಜುಗಳ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತವೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ. ಬದಲಿಗೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು. ಇನ್ನೂ ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಈ‌ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ದಾಖಲೆ ಮತಗಳಿಂದ ಜಯ ಗಳಿಸಲಿದ್ದಾರೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ