ಬೆಂಗಳೂರು, ಮಾ.21. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ತಿಂಗಳಲ್ಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದರು.
ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್ ಒಳಜಗಳದ ಮಿತಿಮೀರಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ನಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು ಅದಕ್ಕಾಗಿ ತಿಂಗಳಲ್ಲೇ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿಯೇ ಅವರು 90 ಜೊತೆ ಬಟ್ಟೆ ಖರೀದಿಸಿರುವುದಾಗಿ ವ್ಯಂಗ್ಯವಾಡಿದರು.
Laxmi News 24×7