Breaking News

ಬೆಂಗಳೂರಲ್ಲಿಂದು ರೈತರ ರಣಕಹಳೆ

Spread the love

ಬೆಂಗಳೂರು: ದೆಹಲಿ ರೈತ ನಾಯಕರ ನೇತೃತ್ವದಲ್ಲಿ ಇಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಭಾರತೀಯ ನಾಯಕರಾದ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯುದ್ಧವೀರ ಸಿಂಗ್ ಭಾಗಿಯಾಗಲಿದ್ದಾರೆ.

ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ದೆಹಲಿಯಲ್ಲಿ 100 ಕ್ಕೂ ಅಧಿಕ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಮಾರ್ಚ್ 26 ರಂದು 4 ತಿಂಗಳು ಪೂರೈಸಲಿದೆ.

ಈ ಹಿನ್ನೆಲೆಯಲ್ಲಿ ರೈತ ನಾಯಕರು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದು, ಸುಮಾರು 25 ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಕೆಎಸ್‌ಆರ್ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರ್ಯಾಲಿ ಆರಂಭವಾಗಲಿದ್ದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಕುರುಬೂರು ಶಾಂತಕುಮಾರ್ ಮೊದಲಾದ ರೈತ ನಾಯಕರು ಭಾಗಿಯಾಗಲಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶ ನಡೆಸಲು ಮಾತ್ರ ಪೊಲೀಸರು ಅವಕಾಶ ನೀಡಿದ್ದಾರೆ. ರ್ಯಾಲಿಗೆ ರೈತ ಸಂಘಟನೆಗಳು, ದಲಿತ ಪರ ಸಂಘಟನೆಗಳು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳಾ ಸಂಘಟನೆಗಳು ಸಾಥ್ ನೀಡಿವೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ