Breaking News

ಶಾಸಕರ ಪುತ್ರನಿಗೆ ಯುವತಿ ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

Spread the love

ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ಸಿಡಿ ಪ್ರಕರಣ ಬಹಿರಂಗವಾಗಿದೆ. ಅಶ್ಲೀಲ ವಿಡಿಯೋ ಇಟ್ಟುಕೊಂಡು ಮಾಜಿ ಶಾಸಕರ ಪುತ್ರನಿಗೆ ಯುವತಿಯೊಬ್ಬಳು ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಧಾರವಾಡದ ಮಾಜಿ ಶಾಸಕರ ಪುತ್ರನಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಬಳಿಕ ವಿಡಿಯೋ ಕಾಲ್ ಮಾಡಿ ಸಲುಗೆ ಬೆಳೆಸಿಕೊಂಡಿದ್ದಳು. ಹೀಗೆ ಮಾಡಿದ್ದ ವಿಡಿಯೋ ಕಾಲ್ ಗಳನ್ನೇ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಳು. ವಿಡಿಯೋ ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಳು.

ಇದರಿಂದ ಹೆದರಿದ ಮಾಜಿ ಶಾಸಕರ ಪುತ್ರ ಫೋನ್ ಫೇ ಮೂಲಕ 13 ಸಾವಿರ ರೂ ಹಣ ವರ್ಗಾವಣೆ ಮಾಡಿದ್ದ. ಬಳಿಕ ಯುವತಿ ಹಾಗೂ ಆಕೆಯ ಕಡೆಯವರು ಪದೇ ಪದೇ ಬ್ಲ್ಯಾಕ್ ಮೇಲ್ ಮಾಡಿ ಹಣ ಕೇಳಲಾರಂಭಿಸಿದ್ದರು. ಇದರಿಂದ ಬೇಸತ್ತ ಮಾಜಿ ಶಾಸಕರ ಪುತ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿ ಹಾಗೂ ಆಕೆ ಗ್ಯಾಂಗ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ