Breaking News

ಎಸ್‌ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ಬಾಲಚಂದ್ರ ಜಾರಕಿಹೊಳಿ

Spread the love

ಬೆಂಗಳೂರು: ಸಿಡಿ ಪ್ರಕರಣದಲ್ಲಿ ರಾಜಿನಾಮೆ ಸಲ್ಲಿಸಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಅವರ ಸಹೋದರ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್‌ಐಟಿ ತನಿಖೆಯ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಮೇಶ್‌ ಜಾರಕಿಹೊಳಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಿಡಿ ಪ್ರಕರಣ ಕುರಿತಂತೆ ಎಸ್‌ ಐ ಟಿ ತನಿಖೆ ಚುರುಕಾಗಿ ಸಾಗುತ್ತಿದೆ.

ತನಿಖೆ ನಡೆಯುತ್ತಿರುವುದರಿಂದ ಬಹಿರಂಗ ಹೇಳಿಕೆ ನೀಡುವುದಿಲ್ಲ. ಸಚಿವರು, ಶಾಸಕರು ಮಾಧ್ಯಮಗಳಿಗೆ ಹೇಳಿಕೆ ನೀಡಬೇಡಿ ಎಂದು ಕಾನೂನು ಸಲಹೆಗಾರರು ತಿಳಿಸಿದ್ದಾರೆ. ಹೀಗಾಗಿ ಬಹಿರಂಗ ಹೇಳಿಕೆ ನೀಡುವುದಿಲ್ಲ. ಎಸ್‌ಐಟಿ ತನಿಖೆ ಸರಿಯಾದ ದಿಕ್ಕಿನಲ್ಲೇ ನಡೆಯುತ್ತಿದೆ ಎಂದು ಹೇಳಿದರು.


Spread the love

About Laxminews 24x7

Check Also

ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ