Breaking News

ಗೋವಾ ಪ್ರವಾಸಿಗರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ

Spread the love

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ವೇಗ ಹೆಚ್ಚುತ್ತಿರುವ ಹಿನ್ನೆಲೆ ಗೋವಾಗೆ ತೆರಳುವ ಪ್ರತಿಯೊಬ್ಬ ಪ್ರವಾಸಿಗರು ಕೊವಿಡ್-19 ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.

ಕೊರೊನಾವೈರಸ್ ನೆಗೆಟಿವ್ ವರದಿ ಕಡ್ಡಾಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.

 

ಕೊವಿಡ್-19 ಶಿಷ್ಟಾಚಾರ ಪಾಲನೆಯ ಉದ್ದೇಶದಿಂದಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು ಅಂತರ-ರಾಜ್ಯ ಪ್ರಯಾಣಿಕರಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸಿವೆ. ಗೋವಾದಲ್ಲಿ ರೆಸ್ಟೋರೆಂಟ್, ಮದುವೆ ಸಭಾಂಗಣ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸ್ಪಷ್ಟಪಡಿಸಿದ್ದಾರೆ.

ಗೋವಾ ಪ್ರವಾಸಿಗರಿಗೆ ಹೊಸ ನಿಯಮ:

ಅನ್ಯರಾಜ್ಯದ ಪ್ರವಾಸಿಗರಿಗೆ ಕೊರೊನಾವೈರಸ್ ಸೋಂಕಿನ ನೆಗಟಿವ್ ವರದಿ ಕಡ್ಡಾಯಗೊಳಿಸುವ ಅಗತ್ಯವಿದೆ. ಇದರ ಹೊರತಾಗಿಯೂ ಗೋವಾದ ವಿಮಾನ ನಿಲ್ದಾಣಗಳಲ್ಲಿ ಕೊರೊನಾವೈರಸ್ ಸೋಂಕಿತ ತಪಾಸಣೆ ಬಗ್ಗೆ ಸರ್ಕಾರವು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಮುಖ್ಯಮಂತ್ರಿಗಳು ಒಪ್ಪಿಗೆ ನೀಡುತ್ತಿದ್ದಂತೆ ಪ್ರವಾಸಿಗರು ಆರ್ ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟು 72 ಗಂಟೆಗಳೊಳಗೆ ಪಡೆದ ಕೊವಿಡ್-19 ನೆಗೆಟಿವ್ ವರದಿಯನ್ನು ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ