Breaking News

ಧ ಇಡಿಗೆ ದೂರು ಕೊಟ್ಟ ಕಾಂಗ್ರೆಸ್ ….

Spread the love

ಬೆಂಗಳೂರು, ಮಾರ್ಚ್ 23: ಮಾಜಿ ಸಚಿವ, ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಹೋರಾಟವನ್ನು ತೀವ್ರಗೊಳಿಸಿದೆ. ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಇಡಿಗೆ ಮಾಜಿ ಸಚಿವರ ವಿರುದ್ಧ ದೂರು ನೀಡಿದೆ.

ಮಂಗಳವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಕಾಂಗ್ರೆಸ್ ಮುಖಂಡ ಮೋಹನ್ ದೂರು ನೀಡಿದ್ದಾರೆ. ಸಿಡಿ ಪ್ರಕರಣದಲ್ಲಿ ನಡೆದಿರುವ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

 

ಮಾಧ್ಯಮಗಳ ಜೊತೆ ಮಾತನಾಡಿದ ಮೋಹನ್, “ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿಯಲ್ಲಿ ಸಿಡಿ ತಯಾರು ಮಾಡಲು 5 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು ಎಂದು ಮನವಿ ಮಾಡಲಾಗಿದೆ” ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಸದಸ್ಯರು ಸದನದಲ್ಲಿಯೂ ಹೋರಾಟ ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರರಕರಣ ದಾಖಲು ಮಾಡಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ಕೋರ್ಟ್ ಮೊರೆ ಹೋಗಿರುವ 6 ಸಚಿವರು ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದೆ.

ಸಿಡಿ ವಿಚಾರದಲ್ಲಿ ಅಪಾರವಾದ ಹಣದ ವಹಿವಾಟು ನಡೆದಿದೆ ಎಂಬ ವರದಿಗಳು ಮಾಧ್ಯಮಗಳಲ್ಲಿಯೂ ಬರುತ್ತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಇಡಿಗೆ ದೂರು ನೀಡಿದೆ. ಸಿಡಿ ಪ್ರರಕಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದ್ದು, ಇದುವರೆಗೂ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿಲ್ಲ.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ