ನವದೆಹಲಿ : ಧೂಮಪಾನಿಗಳಿಗೆ ರೈಲ್ವೆ ಇಲಾಖೆ ಬಿಗ್ ಶಾಕ್ ನೀಡಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ ಧೂಮಪಾನ ಮಾಡಿದರೆ 1000 ರೂ. ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದ್ದು, ಈ ನಿಯಮ ಸೋಮವಾರದಿಂದಲೇ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ.
ರೈಲುಗಳಲ್ಲಿ ಸಂಭವಿಸುತ್ತಿರುವ ಅಗ್ನಿ ದುರಂತ ತಡೆಯುವುದಕ್ಕಾಗಿ ರೈಲ್ವೆ ಇಲಾಖೆ ಈ ಆದೇಶ ಹೊರಡಿಸಿದ್ದು, ಧೂಮಪಾನ ಮಾಡುವುದು ಮತ್ತು ಉರಿಯುವಂತಹ ವಸ್ತುಗಳ ಸಾಗಣೆಗೆ ರೈಲಿನಲ್ಲಿ ಸಂಪೂರ್ಣ ನಿಷೇಧ ಮಾಡಲಾಗಿದೆ. ರೈಲ್ವೆ ಕಾಯ್ದೆಯ ಸೆಕ್ಷನ್ 164 ರ ಪ್ರಕಾರ, ಉರಿಯುವಂತಹ ವಸ್ತುಗಳನ್ನು ರೈಲಿನಲ್ಲಿ ಕೊಂಡೊಯ್ಯುದರೆ 3 ವರ್ಷ ಶಿಕ್ಷೆ ಅಥವಾ 1000 ರೂ. ದಂಡ ವಿಧಿಸಲು ಮುಂದಾಗಿದೆ.