Breaking News

ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ: ಕಾರಜೋಳ ಮನೆ ಎದುರು ಧರಣಿ

Spread the love

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿಯನ್ನು ವಿರೋಧಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮನೆ ಎದುರು ಕರ್ನಾಟಕ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

‘ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಐಡಿಎಲ್‌) ₹2 ಕೋಟಿ ವರೆಗಿನ ಕಾಮಗಾರಿಯನ್ನು ನೇರವಾಗಿ ವಹಿಸುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದು ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರ ಮೀಸಲಾತಿ ಸವಲತ್ತು ದುರ್ಬಲಗೊಳಿಸುವ ಪ್ರಯತ್ನ’ ಎಂದು ಸಂಘ ಆರೋಪಿಸಿತು.

‘ಈ ಕಾಯ್ದೆಗೆ ತಿದ್ದುಪಡಿ ತಂದರೆ ಕೆಟಿಟಿಪಿ ಕಾಯ್ದೆಯ ಮೂಲ ಉದ್ದೇಶಕ್ಕೆ ಧಕ್ಕೆಯಾಗಲಿದೆ ಎಂದು ಅಡ್ವೊಕೇಟ್ ಜನರಲ್ ಅಭಿಪ್ರಾಯ ನೀಡಿದ್ದಾರೆ. ಕೆಆರ್‌ಐಡಿಎಲ್ ಸಂಸ್ಥೆಗೆ ವಿನಾಯಿತಿ ನೀಡಬಾರದು ಎಂದು ಹೈಕೋರ್ಟ್ ಕೂಡ ಹೇಳಿದೆ. ಆದರೂ, ಕೆಟಿಪಿಪಿ ಕಾಯ್ದೆಗೆ ಸರ್ಕಾರ ತಿದ್ದುಪಡಿ ತಂದಿದೆ’ ಎಂದು ಸಂಘದ ಅಧ್ಯಕ್ಷ ಎನ್‌. ಮಹದೇವಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಕೆಆರ್‌ಐಡಿಎಲ್‌ 4ಜಿ ವಿನಾಯಿತಿ ಪಡೆದು ಪ್ರತಿವರ್ಷ ಸಾವಿರಾರು ಕೋಟಿ ಮೊತ್ತದ ಕಾಮಗಾರಿ ನಿರ್ವಹಿಸುತ್ತಿದೆ. ಎಸ್‌.ಆರ್. ದರಕ್ಕಿಂತ ಹೆಚ್ಚಿನ ಮೊತ್ತಕ್ಕೆ (ಶೇ 8ರಿಂದ ಶೇ 11) ಕಾಮಗಾರಿ ನಿರ್ವಹಿಸಲಾಗಿದೆ. ಇದರಿಂದ ಬೊಕ್ಕಸಕ್ಕೆ ನಷ್ಟವಾಗಿದೆ. ಇದೆಲ್ಲವೂ ಸರ್ಕಾರಕ್ಕೆ ತಿಳಿದಿದ್ದರೂ ಸ್ವಹಿತಾಸಕ್ತಿಗಾಗಿ ಕೆಟಿಪಿಪಿ ಕಾಯ್ದೆಯನ್ನು ಹಾಳು ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುತ್ತಿಗೆ ಮೀಸಲಾತಿ ಮಿತಿಯನ್ನು ₹50 ಲಕ್ಷದಿಂದ ₹1 ಕೋಟಿಗೆ ಹೆಚ್ಚಳ ಮಾಡುವ ಘೋಷಣೆ 2018-19ನೇ ಸಾಲಿನ ಬಜೆಟ್‌ನಲ್ಲಿ ಮಾಡಲಾಗಿದೆ. ಆದರೆ, ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿಲ್ಲ. ಕೂಡಲೇ ಆದೇಶ ಹೊರಡಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ