ನವದೆಹಲಿ, ಮಾ.25- ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.
ದೇಶದ 25 ಹೈಕೋರ್ಟ್‍ಗಳಲ್ಲಿ 1080 ನ್ಯಾಯಮೂರ್ತಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, 419 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇತ್ತು. ಇದೀಗ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ಎಲ್ಲಾ ಹುದ್ದೆಗಳು ಭರ್ತಿಯಾಗಿವೆ.
ಅಲಹಬಾದ್ ಹೈಕೋರ್ಟ್‍ಗೆ 40 ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ನ್ಯಾಯಾಧೀಶರ ಸಂಖ್ಯೆ 160ಕ್ಕೆ ಹೆಚ್ಚಳವಾಗಿದೆ. ಆದರೆ, ಅಲ್ಲಿ 96 ನ್ಯಾಯಮೂರ್ತಿಗಳು ಮಾತ್ರ ಕರ್ತವ್ಯ ನಿರ್ವಹಿಸಲು ಅವಕಾಶವಿದೆ.
Laxmi News 24×7