Breaking News
Home / ರಾಜ್ಯ / ಪ್ರಕರಣ ದಾಖಲಿಸಿರುವುದಕ್ಕೆ ಹೆದರುವುದಿಲ್ಲ, ಮಸೂದೆ ಹಿಂಪಡೆಯದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ: ರಾಕೇಶ್ ಟಿಕಾಯತ್

ಪ್ರಕರಣ ದಾಖಲಿಸಿರುವುದಕ್ಕೆ ಹೆದರುವುದಿಲ್ಲ, ಮಸೂದೆ ಹಿಂಪಡೆಯದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ: ರಾಕೇಶ್ ಟಿಕಾಯತ್

Spread the love

ಬೆಂಗಳೂರು: ನನ್ನ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಹೆದರುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಮಸೂದೆಗಳನ್ನು ರದ್ದುಪಡಿಸಿದರೆ ಮಾತ್ರ ಪ್ರತಿಭಟನೆ ಕೈಬಿಡುತ್ತೇವೆಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಸಿಂಗ್ ಟಿಕಾಯತ್ ಹೇಳಿದ್ದಾರೆ.

ದೆಹಲಿ ರೀತಿ ಬೆಂಗಳೂರನ್ನು ಮುತ್ತಿಗೆ ಹಾಕುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಟಿಕಾಯತ್, ದೂರಿಗೆ ಹೆದರುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಸೂದೆ ಹಿಂಪಡೆಯದ ಹೊರತು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಟಿಕಾಯತ್ ವಿರುದ್ಧ ಪ್ರಕರಣ ದಾಖಲಿಸಿರುವುದಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ನಾಯಕ ಕೆಟಿ ಗಂಗಾಧರ್ ಕೂಡ ತೀವ್ರ ಖಂಡನೆ ವ್ಯಕ್ತಪಡಿಸಿತ್ತು. ಈ ರೀತಿ ಪ್ರಕರಣ ದಾಖಲಿಸುವ ಮೂಲಕ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚುತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿಯವರ ತಂದೆ ಎಸ್.ಆರ್.ಬೊಮ್ಮಾಯಿ ಕೂಡ ಕೂಡ ಹೋರಾಟಗಾರರಾಗಿದ್ದಾರೆ. ಜೆಪಿ ಚಳುವಳಿಯಲ್ಲಿ ಅವರು ಭಾಗಿಯಾಗಿದ್ದರು. ಆದರೆ, ಅವರ ಪುತ್ರನೇ ಇದೀಗ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸುವ ಕೆಲಸ ಮಾಡುತ್ತಿದ್ದಾರೆ.

ಸಿಎಂ ಯಡಿಯೂರಪ್ಪ ಕೂಡ ಒಬ್ಬ ಹೋರಾಟಗಾರ. ಕಾಂಗ್ರೆಸ್ ಸರ್ಕಾರ ಅವರ ವಿರುದ್ಧವೂ ಪ್ರಕರಣ ದಾಖಲಿಸಿತ್ತು. ಇಂತಹ ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದು ನಮಗೆ ಗೊತ್ತಿದೆ. ಸರ್ಕಾರದ ಈ ಕ್ರಮಗಳು ನಮಗೆ ಮತ್ತಷ್ಟು ಪ್ರೇರಣೆ ನೀಡಲಿದೆ. ಇದರಿಂದ ನಮ್ಮ ಬಲ ಮತ್ತಷ್ಟು ಹೆಚ್ಚಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ