Breaking News

ಸಿಡಿ ಲೇಡಿಯ’ 2ನೇ ವೀಡಿಯೋ ಹೇಳಿಕೆ ಕುರಿತು ‘ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ’ ಹೇಳಿದ್ದೇನು ಗೊತ್ತಾ.?

Spread the love

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿ ಇಂದು ಎರಡನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆ ವೀಡಿಯೋದಲ್ಲಿ ಎಸ್‌ಐಟಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೂಡ ಮಾಡಿದ್ದರು. ಇದರ ಬಗ್ಗೆ ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಏನ್ ಹೇಳಿದ್ರು ಅಂತ ಮುಂದೆ ಓದಿ..

ಸಿಡಿಯಲ್ಲಿನ ಸಂತ್ರಸ್ತ ಯುವತಿ ಇಂದು 2ನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ, ಆ ವೀಡಿಯೋದಲ್ಲಿ ತಾನು ಸಿಡಿಯನ್ನು ಪೊಲೀಸ್ ಕಮೀಷನರ್ ಅವರಿಗೆ ತಲುಪಿಸಿದ್ದೇ, ಅದನ್ನು ತಡವಾಗಿ ಬಿಡುಗಡೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಿ, ಎಸ್ ಐಟಿ ಪೊಲೀಸರ ಬಗ್ಗೆಯೇ ಅನುಮಾನ ವ್ಯಕ್ತ ಪಡಿಸಿದ್ದರು.

ಇದರ ಬಗ್ಗೆ ಪ್ರತಿಕ್ರಿಯಿಸಿರುವಂತ ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿಯವರು, ವೀಡಿಯೋದಲ್ಲಿ ಯುವತಿ ಹೇಳಿರೋದೆಲ್ಲಾ ಸುಳ್ಳು. ನನಗೆ ಯುವತಿ ಯಾವುದೇ ರೀತಿಯ ವೀಡಿಯೋ ಕೊಟ್ಟಿಲ್ಲ. ವಿಚಾರಣೆಗೆ ಹಾಜರಾಗುವಂತೆ 5 ಬಾರಿ ಯುವತಿಗೆ ನೋಟಿಸ್ ಕೊಟ್ಟಿದ್ದೇವೆ. ಹೀಗಿದ್ದೂ ವಿಚಾರಣೆಗೆ ಬಂದಿಲ್ಲ. ಯುವತಿ ಇರೋ ಕಡೆಯಲ್ಲಿ ವಿಚಾರಣೆ ಮಾಡುವುದಾಗಿ ತಿಳಿಸಿದ್ದರೂ, ಯುವತಿ ತಾನಿರುವ ಮಾಹಿತಿಯನ್ನು ನೀಡಿಲ್ಲ ಎಂಬುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ