Breaking News

ಒಂದಲ್ಲ, ನನ್ನ ವಿರುದ್ಧ ಇನ್ನೂ 10 ಸಿಡಿ ಬರಲಿ ಎದುರಿಸಲು ನಾನು ಸಿದ್ಧನಿದ್ದೇನೆ.: ರಮೇಶ್ ಜಾರಕಿಹೊಳಿ

Spread the love

ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ನಡೆದಿರುವುದಂತು ಸ್ಪಷ್ಟ. ಸಾಕಷ್ಟು ಪ್ಲಾನ್ ಮಾಡಿ ನನ್ನನ್ನು ಸಿಲುಕಿಸುವ ತಂತ್ರ ಮಾಡಿದ್ದಾರೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸಿಡಿ ಲೇಡಿ ಮತ್ತೊಂದು ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ದೂರು ಕೊಟ್ಟು ಅರ್ಧ ಗಂಟೆ ಬಳಿಕ ಸಿಡಿ ಬಿಡುಗಡೆಯಾಗುತ್ತೆ. ಕೆಲ ದಿನಗಳ ನಂತರ ಯುವತಿ ಒಂದು ವಿಡಿಯೋ ಹೇಳಿಕೆ ನೀಡುತ್ತಾಳೆ. ಆನಂತರ ಈಗ ಮತ್ತೊಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾಳೆ. ಆಕೆ ಯಾರದೋ ಕೈಗೊಂಬೆಯಾಗಿ ಕೆಲಸಮಾಡುತ್ತಿದ್ದಾಳೆ. ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದರು.

ಒಂದಲ್ಲ, ನನ್ನ ವಿರುದ್ಧ ಇನ್ನೂ 10 ಸಿಡಿ ಬರಲಿ ಎದುರಿಸಲು ನಾನು ಸಿದ್ಧನಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ಈ ಷಡ್ಯಂತ್ರದ ಹಿಂದೆ ಇರುವ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸದೇ ಬಿಡುವುದಿಲ್ಲ. ನಾನು ದೇವರ ದಯೆಯಿಂದ ಆರೋಪ ಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಇನ್ನು ನನ್ನ ಬಳಿಯೂ ಮಹತ್ವದ ಎವಿಡೆನ್ಸ್ ಗಳಿವೆ. ಅದನ್ನು ಬಿಡುಗಡೆ ಮಾಡಿದರೆ ನೀವೂ ಕೂಡ ಶಾಕ್ ಆಗುತ್ತೀರಿ. ಸಂದರ್ಭ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇನೆ. ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರ ಗೌರವ ಇತ್ತು. ಆದರೆ ಅವರ ಹೇಳಿಕೆಗಳನ್ನು ನೋಡಿ ನನಗೆ ಶಾಕ್ ಆಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ